ನವದೆಹಲಿ (ಪಿಟಿಐ): ಭಾರತ ಮಹಿಳಾ ತಂಡ ಇಲ್ಲಿ ನಡೆಯುತ್ತಿರುವ ಮೂರನೇ ಹಾಕಿ ಟೆಸ್ಟ್ ಪಂದ್ಯದಲ್ಲಿ 3-0 ಗೋಲುಗಳಿಂದ ಅಜರ್‌ಬೈಜಾನ್ ತಂಡವನ್ನು ಸೋಲಿಸಿತು.
ಮೇಜರ್ ಧ್ಯಾನಚಂದ್ ರಾಷ್ಟ್ರೀಯ ಹಾಕಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಗೆಲುವು ಪಡೆದ ಆತಿಥೇಯ ತಂಡ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-0ರಲ್ಲಿ ಮುನ್ನಡೆ ಸಾಧಿಸಿತು.
ಪಂದ್ಯದ ಆರಂಭದಿಂದ ಆತಿಥೇಯ ತಂಡ ಮುನ್ನಡೆ ಹೊಂದಿತ್ತು.ಇದಕ್ಕೆ ಸುಶೀಲಾ ಚಾನು 3ನೇ ನಿಮಿಷದಲ್ಲಿ ಗಳಿಸಿದ ಗೋಲು ಕಾರಣವಾಯಿತು. ನಂತರ ಅನುರಾಧಾ ದೇವಿ 22ನೇ ನಿಮಿಷದಲ್ಲಿ ಮತ್ತೊಂದು ಗೋಲು ಗಳಿಸಿ ಪ್ರಥಮಾರ್ಧದ ವೇಳೆಗೆ ಮುನ್ನಡೆಯನ್ನು 2-0ಕ್ಕೆ ಹೆಚ್ಚಿಸಿದರು. ನಂತರ ರಿತು ರಾಣಿ 67ನೇ ನಿಮಿಷದಲ್ಲಿ ಕಲೆ ಕಲೆ ಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.