ADVERTISEMENT

ಹಾಕಿ: ರೇಂಜರ್ಸ್‌ ಕ್ಲಬ್‌ಗೆ ಜಯ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 19:30 IST
Last Updated 8 ಅಕ್ಟೋಬರ್ 2012, 19:30 IST

ಬೆಂಗಳೂರು: ರೇಂಜರ್ಸ್‌ ಹಾಕಿ ಕ್ಲಬ್ ತಂಡದವರು ಕೆಎಸ್‌ಎಚ್‌ಎ ಆಶ್ರಯದಲ್ಲಿ ನಡೆಯುತ್ತಿರುವ ತಿರುವಾಂಕೂರ್ ಕಪ್ ಹಾಕಿ ಟೂರ್ನಿಯ ಸೋಮವಾರದ ಪಂದ್ಯದಲ್ಲಿ 2-1ಗೋಲುಗಳಿಂದ ನವೀನ್ ಕ್ಲಬ್ ಎದುರು ಗೆಲುವು ಸಾಧಿಸಿದರು.

ಅಕ್ಕಿ ತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವಿಜಯಿ ತಂಡದ ಮೈಕಲ್ (7ನೇ ನಿ.) ಗೋಲಿನ ಖಾತೆ ತೆರೆದರು. ಇದಕ್ಕೆ ಪ್ರಬಲ ಪೈಪೋಟಿ ಒಡ್ಡಿದ ನವೀನ್ ಕ್ಲಬ್‌ನ ಸುಜಿತ್‌ರಾವ್ 28ನೇ ನಿಮಿಷದಲ್ಲಿ ಗೋಲು ತಂದಿತ್ತರು. ಆದ್ದರಿಂದ ಉಭಯ ತಂಡಗಳು ವಿರಾಮದ ವೇಳೆಗೆ 1-1ರಲ್ಲಿ ಸಮಬಲ ಸಾಧಿಸಿದ್ದವು.

ವಿರಾಮದ ನಂತರ ಜೋಷು (47ನೇ ನಿ.) ಗಳಿಸಿ ರೇಂಜರ್ಸ್‌ ತಂಡದ ಗೆಲುವಿಗೆ ಕಾರಣರಾದರು.
ಮಂಗಳವಾರದ ಪಂದ್ಯ: ಪ್ರಿಮ್‌ರೋಸ್ ಕ್ಲಬ್-ರೇಂಜರ್ಸ್‌ ಕ್ಲಬ್ (ಸಂಜೆ 4.15ಕ್ಕೆ).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.