ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಇತ್ತೀಚೆಗೆ ಹುತಾತ್ಮರಾದ ಕಾಶ್ಮೀರದ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಅಬ್ದುಲ್ ರಶೀದ್ ಅವರ ಮಗಳ ಶಿಕ್ಷಣದ ವೆಚ್ಚವನ್ನು ಭರಿಸುವುದಾಗಿ ಕ್ರಿಕೆಟಿಗ ಗೌತಮ್ ಗಂಭೀರ್ ಘೋಷಿಸಿದ್ದಾರೆ.
ಈ ಕುರಿತು ಗಂಭೀರ್ ಅವರು ಟ್ವಿಟರ್‌ನಲ್ಲಿ ಭಾವನಾತ್ಮಕವಾಗಿ ಸಂದೇಶ ಹಂಚಿಕೊಂಡಿದ್ದಾರೆ.
‘ಜೋಹ್ರಾ, ನನಗೆ ನಿನ್ನನ್ನು ಜೋಗುಳ ಹಾಡಿ ನಿದ್ದೆ ಮಾಡಿಸುವುದು ಸಾಧ್ಯವಾಗದು. ಆದರೆ, ನಿನ್ನ ಕನಸುಗಳನ್ನು ಸಾಕಾರಗೊಳಿಸುವ ಸಲುವಾಗಿ ನಿನ್ನನ್ನು ಎಬ್ಬಿಸಲು ನೆರವಾಗಬಲ್ಲೆ. ಜೀವನಪರ್ಯಂತ ನಿನ್ನ ಶಿಕ್ಷಣಕ್ಕೆ ಬೆಂಬಲ ನೀಡುವೆ’ ಎಂದು ‘ಡಾಟರ್ ಆಫ್ ಇಂಡಿಯಾ’ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಗಂಭೀರ್ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.