ಹೈದರಾಬಾದ್ (ಪಿಟಿಐ): ಏಕದಿನ ಕ್ರಿಕೆಟ್ ಸರಣಿಯನ್ನಾಡಲು ಅಲಿಸ್ಟರ್ ಕುಕ್ ನೇತೃತ್ವದ ಇಂಗ್ಲೆಂಡ್ ತಂಡ ಮಂಗಳವಾರ ಇಲ್ಲಿಗೆ ಆಗಮಿಸಿತು. ಪ್ರವಾಸಿ ತಂಡ ಆತಿಥೇಯ ಭಾರತದ ವಿರುದ್ಧ ಐದು ಏಕದಿನ ಹಾಗೂ ಒಂದು ಟ್ವೆಂಟಿ-20 ಪಂದ್ಯವನ್ನಾಡಲಿದೆ.
ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆಟಗಾರರು ನೇರವಾಗಿ ನಗರದಲ್ಲಿನ ಹೋಟೆಲ್ಗೆ ತೆರಳಿದರು. ಆದ್ದರಿಂದ ನಗರದಾದ್ಯಂತ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.
ಈ ಆಟಗಾರರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.