
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ‘ಜರ್ಮನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿರುವುದು ಅರವಿಂದ್ ಭಟ್ ಅವರ ಅಂತರರಾಷ್ಟ್ರೀಯ ವೃತ್ತಿ ಬದುಕಿಗೆ ಹೊಸ ತಿರುವು ನೀಡಿದೆ’ ಎಂದು ರಾಷ್ಟ್ರೀಯ ಮುಖ್ಯ ಕೋಚ್ ಪುಲ್ಲೇಲಾ ಗೋಪಿಚಂದ್ ಅಭಿಪ್ರಾಯಪಟ್ಟಿದ್ದಾರೆ.
‘ಇದು ಅಮೋಘ ಗೆಲುವು. ನನ್ನ ಪ್ರಕಾರ ಈ ಗೆಲುವು ಪುರುಷರ ಸಿಂಗಲ್ಸ್‌ನಲ್ಲಿ ಮೂಡಿಬಂದ ಅತ್ಯುತ್ತಮ ಗೆಲುವುಗಳಲ್ಲಿ ಒಂದು. ಟೂರ್ನಿಯ ಗುಣಮಟ್ಟ ಅತ್ಯುತ್ತಮವಾಗಿತ್ತು. ಈ ಟೂರ್ನಿಯಲ್ಲಿ ಅರವಿಂದ್ ಅವರ ಪ್ರದರ್ಶನ ಅದ್ಭುತವಾಗಿತ್ತು’ ಎಂದು ಗೋಪಿಚಂದ್ ಹೇಳಿದ್ದಾರೆ.
ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಅರವಿಂದ್ ಸಿಂಗಲ್ಸ್‌ನಲ್ಲಿ ಪ್ರಶಸ್ತಿ ಜಯಿಸಿದ್ದರು. ಕಶ್ಯಪ್, ಅರುಂಧತಿ ಪಂಥವಾನೆ ಸೇರಿದಂತೆ ಪ್ರಮುಖ ಆಟಗಾರರು ಪಾಲ್ಗೊಂಡಿ ದ್ದರೂ, ಅರವಿಂದ್ ಎಲ್ಲರಿಗಿಂತಲೂ ಉತ್ತಮ ಪ್ರದರ್ಶನ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.