ADVERTISEMENT

13ರಿಂದ ಯೂತ್ ಬ್ಯಾಸ್ಕೆಟ್‌ಬಾಲ್

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2013, 19:59 IST
Last Updated 10 ಏಪ್ರಿಲ್ 2013, 19:59 IST

ಬೆಂಗಳೂರು: ಕರ್ನಾಟಕ ರಾಜ್ಯ ಬ್ಯಾಸ್ಕೆಟ್‌ಬಾಲ್ ಸಂಸ್ಥೆ ವತಿಯಿಂದ ಏಪ್ರಿಲ್ 13ರಿಂದ 18ರ ವರೆಗೆ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಯೂತ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್ ನಡೆಯಲಿದೆ.

ಬಾಲಕರ 46 ಹಾಗೂ ಬಾಲಕಿಯರ 24 ತಂಡಗಳು ಈ ಟೂರ್ನಿಯಲ್ಲಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.

ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಗಳು ಜರುಗಲಿವೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.