ADVERTISEMENT

15ರಂದು ಐಸಿಸಿ ಸಭೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2011, 18:30 IST
Last Updated 13 ಫೆಬ್ರುವರಿ 2011, 18:30 IST

ದುಬೈ (ಪಿಟಿಐ): ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಸಿಕ್ಕಿಬಿದ್ದು ಅಮಾನತು ಶಿಕ್ಷೆಗೆ ಗುರಿಯಾಗಿರುವ ಪಾಕಿ ಸ್ತಾನದ ಮೂವರು ಕ್ರಿಕೆಟ್ ಆಟಗಾರರ ಕುರಿತು ಚರ್ಚಿಸಲು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಫೆಬ್ರುವರಿ 15ರಂದು ಸಭೆ ನಡೆಸಲಿದೆ.

ಪಾಕಿಸ್ತಾನ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಸಲ್ಮಾನ್ ಬಟ್, ಮೊಹಮ್ಮದ್ ಆಸೀಫ್, ಹಾಗೂ ಮೊಹಮ್ಮದ್ ಅಮೇರ್ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಸಿಕ್ಕಿ ಬಿದ್ದಿದ್ದರು. ಈ ಮೂವರು ಆಟಗಾರರು ಕ್ರಮವಾಗಿ ಹತ್ತು, ಏಳು ಮತ್ತು ಐದು ವರ್ಷ ಕ್ರಿಕೆಟ್‌ನಿಂದ ಅಮಾನತು ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.