ಬೆಂಗಳೂರು (ಪಿಟಿಐ): ಪಂಕಜ್ ಅಡ್ವಾಣಿ ಅವರು ಅಂತರರಾಷ್ಟ್ರೀಯ ಸ್ನೂಕರ್ ಚಾಂಪಿಯನ್ಷಿಪ್ನ ಬದಲು ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ.
ಇವೆರಡು ಟೂರ್ನಿಗಳು ಒಂದೇ ಅವಧಿಯಲ್ಲಿ ನಡೆಯಲಿರುವ ಕಾರಣ ಪಂಕಜ್ ಇಕ್ಕಟ್ಟಿಗೆ ಸಿಲುಕಿದ್ದರು. ಕೊನೆಗೆ ಸ್ನೂಕರ್ ಬದಲು ಬಿಲಿಯರ್ಡ್ಸ್ ಚಾಂಪಿಯನ್ಷಿಪ್ನಲ್ಲಿ ಆಡುವ ತೀರ್ಮಾನ ಕೈಗೊಂಡರು. ಇತ್ತೀಚೆಗಷ್ಟೇ ವೃತ್ತಿಪರ ಸ್ನೂಕರ್ ಆಟಗಾರರಾಗಿ ಬದಲಾಗಿದ್ದ ಪಂಕಜ್ ಅಕ್ಟೋಬರ್ 28ರಿಂದ ನವೆಂಬರ್ 4ರ ವರೆಗೆ ಚೀನಾದ ಚೆಂಗ್ಡುವಿನಲ್ಲಿ ನಡೆಯುವ ಅಂತರರಾಷ್ಟ್ರೀಯ ಸ್ನೂಕರ್ ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದರು.
ಅಂದಾಜು ಐದು ಕೋಟಿ ರೂ. ಬಹುಮಾನ ಮೊತ್ತದ ಈ ಟೂರ್ನಿ ವಿಶ್ವದ `ಅತ್ಯಂತ ಶ್ರೀಮಂತ ಸ್ನೂಕರ್ ಟೂರ್ನಿ~ ಎನಿಸಿದೆ. ಆದರೆ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ಷಿಪ್ ಅಕ್ಟೋಬರ್ 18 ರಿಂದ 28ರ ವರೆಗೆ ಇಂಗ್ಲೆಂಡ್ನ ಲೀಡ್ಸ್ನಲ್ಲಿ ನಡೆಯಲಿದೆ. ಈ ಕಾರಣ ಅವರು ಸ್ನೂಕರ್ ಬದಲು, ಬಿಲಿಯರ್ಡ್ಸ್ ಚಾಂಪಿಯನ್ಷಿಪ್ನಲ್ಲಿ ಆಡಲು ನಿರ್ಧರಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.