ADVERTISEMENT

21ನೇ ಸ್ವರ್ಣ ಪದಕಕ್ಕೆ ಮುತ್ತಿಟ್ಟ ಫೆಲ್ಪ್ಸ್‌

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2016, 7:55 IST
Last Updated 10 ಆಗಸ್ಟ್ 2016, 7:55 IST
21ನೇ ಸ್ವರ್ಣ ಪದಕಕ್ಕೆ ಮುತ್ತಿಟ್ಟ ಫೆಲ್ಪ್ಸ್‌
21ನೇ ಸ್ವರ್ಣ ಪದಕಕ್ಕೆ ಮುತ್ತಿಟ್ಟ ಫೆಲ್ಪ್ಸ್‌   

ರಿಯೊ ಡಿ ಜನೈರೊ (ಎಎಫ್‌ಪಿ): ರಿಯೊ ಒಲಿಂಪಿಕ್ಸ್‌ನಲ್ಲಿ ಅಮೆರಿಕದ ಈಜುಪಟು ಮೈಕಲ್‌ ಫೆಲ್ಪ್ಸ್‌ ಅವರು 21ನೇ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

4X200 ಮೀ. ಫ್ರೀಸ್ಟೈಲ್ ರಿಲೇ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಫೆಲ್ಪ್ಸ್ ಚಿನ್ನದ ಬೇಟೆಯಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಫೆಲ್ಪ್ಸ್‌ ಒಲಿಂಪಿಕ್‌ ಕೂಟಗಳಲ್ಲಿ ಒಟ್ಟಾರೆಯಾಗಿ 21 ಚಿನ್ನದ ಪದಕಗಳನ್ನು ಗೆದ್ದ ಸಾಧನೆ ಮಾಡಿದ್ದಾರೆ.

ಫೆಲ್ಪ್ಸ್‌ ಅಥೆನ್ಸ್‌ನಲ್ಲಿ (2004) ಆರು, ಬೀಜಿಂಗ್‌ನಲ್ಲಿ (2008) ಎಂಟು ಮತ್ತು ಲಂಡನ್‌ನಲ್ಲಿ (2012) ನಾಲ್ಕು ಚಿನ್ನದ ಪದಕ ಜಯಿಸಿದ್ದರು. ರಿಯೊ ಒಲಿಂಪಿಕ್ಸ್‌ನಲ್ಲಿ ಅವರು ಮೂರು ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.