ವಿಜ್ಕ್ ಆ್ಯನ್ ಜೀ, ನೆದರ್ಲೆಂಡ್ಸ್: ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್, ಟಾಟಾ ಸ್ಟೀಲ್ ಮಾಸ್ಟರ್ಸ್ ಚೆಸ್ ಟೂರ್ನಿಯ ಆರನೇ ಸುತ್ತಿನಲ್ಲಿ ಡ್ರಾ ಮಾಡಿಕೊಂಡಿದ್ದಾರೆ.
ಶುಕ್ರವಾರ ನಡೆದ ಪೈಪೋಟಿಯಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ಆನಂದ್, ನೆದರ್ಲೆಂಡ್ಸ್ನ ಅನಿಶ್ ಗಿರಿ ವಿರುದ್ಧ ಪಾಯಿಂಟ್ ಹಂಚಿಕೊಂಡರು. ಈ ಡ್ರಾದೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಜಂಟಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.
ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ಗೆದ್ದಿದ್ದ ಆನಂದ್, ಆ ನಂತರ ಸತತ ಮೂರು ಪಂದ್ಯಗಳಲ್ಲಿ ಡ್ರಾ ಮಾಡಿಕೊಂಡಿದ್ದಾರೆ. ಭಾರತದ ಆಟಗಾರನ ಖಾತೆಯಲ್ಲಿ ನಾಲ್ಕು ಪಾಯಿಂಟ್ಸ್ ಇವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.