ADVERTISEMENT

ಕರ್ನಾಟಕದ ತಂಡಗಳಿಗೆ ಬೆಳ್ಳಿ

ರಾಷ್ಟ್ರೀಯ ಸಬ್‌ ಜೂನಿಯರ್‌ ನೆಟ್‌ಬಾಲ್‌ ಚಾಂಪಿಯನ್‌ಷಿಪ್‌

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2018, 19:30 IST
Last Updated 3 ಫೆಬ್ರುವರಿ 2018, 19:30 IST
ರಾಷ್ಟ್ರೀಯ ಸಬ್‌ ಜೂನಿಯರ್‌ ನೆಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಕರ್ನಾಟಕದ ಬಾಲಕರ ಮತ್ತು ಬಾಲಕಿಯರ ತಂಡದವರು ಟ್ರೋಫಿಯೊಂದಿಗೆ ಖುಷಿ ಪಟ್ಟರು
ರಾಷ್ಟ್ರೀಯ ಸಬ್‌ ಜೂನಿಯರ್‌ ನೆಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಕರ್ನಾಟಕದ ಬಾಲಕರ ಮತ್ತು ಬಾಲಕಿಯರ ತಂಡದವರು ಟ್ರೋಫಿಯೊಂದಿಗೆ ಖುಷಿ ಪಟ್ಟರು   

ಬೆಂಗಳೂರು: ಕರ್ನಾಟಕದ ಬಾಲಕರ ಮತ್ತು ಬಾಲಕಿಯರ ತಂಡದವರು ಬಿಹಾರದಲ್ಲಿ ನಡೆದ 23ನೇ ರಾಷ್ಟ್ರೀಯ ಸಬ್‌ ಜೂನಿಯರ್‌ ನೆಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಬಾಲಕಿಯರ ವಿಭಾಗದ ಫೈನಲ್‌ನಲ್ಲಿ ಕರ್ನಾಟಕ ತಂಡ 28–44 ಪಾಯಿಂಟ್ಸ್‌ನಿಂದ ಹರಿಯಾಣ ತಂಡದ ಎದುರು ಪರಾಭವಗೊಂಡಿತು.

ಇದಕ್ಕೂ ಮುನ್ನ ನಡೆದಿದ್ದ ಸೆಮಿಫೈನಲ್‌ನಲ್ಲಿ ರಾಜ್ಯ ತಂಡದವರು 31–5ರಿಂದ ಗುಜರಾತ್‌ ತಂಡದ ಎದುರು ಗೆದ್ದಿದ್ದರು.

ADVERTISEMENT

ಕರ್ನಾಟಕದ ಬಾಲಕರ ತಂಡದವರು ಪ್ರಶಸ್ತಿ ಸುತ್ತಿನಲ್ಲಿ 26–36 ಪಾಯಿಂಟ್ಸ್‌ನಿಂದ ಹರಿಯಾಣ ತಂಡಕ್ಕೆ ಶರಣಾದರು.

ನಾಲ್ಕರ ಘಟ್ಟದ ಹೋರಾಟದಲ್ಲಿ ರಾಜ್ಯ ತಂಡ 36–12ರಿಂದ ಗುಜರಾತ್‌ ತಂಡಕ್ಕೆ ಸೋಲುಣಿಸಿತ್ತು. ರಾಜ್ಯ ತಂಡ ಎಲ್ಲಾ ವಿಭಾಗಗಳಲ್ಲೂ ಮಿಂಚಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.