ಕಿಂಬರ್ಲಿ, ದಕ್ಷಿಣ ಆಫ್ರಿಕಾ: ಇಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ವೇಗಿ ಜೂಲನ್ ಏಕದಿನ ಕ್ರಿಕೆಟ್ನಲ್ಲಿ 200 ವಿಕೆಟ್ ಕಬಳಿಸಿ ಹೊಸ ದಾಖಲೆ ನಿರ್ಮಿಸಿದರು.
ಹಿರಿಯ ಆಟಗಾರ್ತಿ ಜೂಲನ್ ಗೋಸ್ವಾಮಿ 200ನೇ ವಿಕೆಟ್ ಪಡೆದು ಈ ಸಾಧನೆ ಮಾಡಿದ ಮೊದಲ ಮಹಿಳಾ ಆಟಗಾರ್ತಿ ಎಂಬ ದಾಖಲೆ ತಮ್ಮದಾಗಿಸಿಕೊಂಡರು. ಆರಂಭಿಕ ಆಟಗಾರ್ತಿ ಲಾರಾ ವೊಲ್ವಾರ್ಟ್ ಅವರನ್ನು ಔಟ್ ಮಾಡುವ ಮೂಲಕ ಅವರು ಈ ಸಾಧನೆ ಮಾಡಿದರು. ಇದು ಅವರ 166ನೇ ಪಂದ್ಯವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.