ನ್ಯೂಯಾರ್ಕ್ (ಎಎಫ್‌ಪಿ): ದಕ್ಷಿಣ ಆಫ್ರಿಕಾದ ಕೆವಿನ್ ಆ್ಯಂಡರ್ಸನ್ ವೃತ್ತಿಜೀವನದ ನಾಲ್ಕನೇ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಎಟಿಪಿ ನ್ಯೂಯಾರ್ಕ್ ಓಪನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಆ್ಯಂಡರ್ಸನ್ 4–6, 6–3, 7–6ರಲ್ಲಿ ಅಮೆರಿಕದ ಸ್ಯಾಮ್ ಕ್ವೆರಿ ಅವರನ್ನು ಮಣಿಸಿದರು.
31 ವರ್ಷದ ಆಟಗಾರ ಆ್ಯಂಡರ್ಸನ್ ಹೋದ ವರ್ಷ ಅಮೆರಿಕ ಓಪನ್ ಫೈನಲ್‌ನಲ್ಲಿ ಸೋತಿದ್ದರು.
‘ಈ ಪ್ರಶಸ್ತಿಯಿಂದ ನನ್ನ ಆತ್ಮವಿಶ್ವಾಸ ಹೆಚ್ಚಿದೆ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.