ಕ್ರಿಕೆಟ್
ಕಡಪ: ಆಂಧ್ರದ ಬ್ಯಾಟರ್ ವಂಶಿ ಕೃಷ್ಣ ಒಂದೇ ಓವರ್‌ನಲ್ಲಿ 6 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.
ಕಡಪದಲ್ಲಿ ನಡೆದ ಕರ್ನಲ್ ಸಿ. ಕೆ. ನಾಯ್ಡು ಟ್ರೋಫಿಯಲ್ಲಿ ವಂಶಿ ಕೃಷ್ಣ ಈ ಸಾಧನೆ ಮಾಡಿದ್ದಾರೆ. ರೈಲ್ವೆ ತಂಡದ ವಿರುದ್ಧ ಆಡಿದ ಅವರು ಸ್ಪಿನ್ನರ್ ದಮನ್‌ದೀಪ್ ಸಿಂಗ್ ಬೌಲಿಂಗ್‌ನಲ್ಲಿ ಆರು ಸಿಕ್ಸರ್ ಬಾರಿಸಿದ್ದಾರೆ.
ವಂಶಿ ಕೃಷ್ಣ ಆರು ಸಿಕ್ಸರ್ ಹೊಡೆದಿರುವ ವಿಡಿಯೊವನ್ನು ಬಿಸಿಸಿಐ ಹಂಚಿಕೊಂಡಿದೆ. ಈ ಪಂದ್ಯದಲ್ಲಿ 64 ಎಸೆತಗಳನ್ನು ಎದುರಿಸಿದ ಅವರು 110 ರನ್‌ಗಳಿಸಿದರು.
ಸಿ.ಕೆ. ನಾಯ್ಡು ಟ್ರೋಫಿಯು ಅಂಡರ್-23ರ ರಾಷ್ಟ್ರೀಯ ಪಂದ್ಯಾವಳಿಯಾಗಿದೆ.
2007ರ ಟಿ–20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಯುವರಾಜ್ ಸಿಂಗ್ ಒಂದೇ ಓವರ್‌ನಲ್ಲಿ ಸ್ಟುವರ್ಟ್ ಬ್ರಾಡ್‌ಗೆ 6 ಸಿಕ್ಸರ್‌ಗಳನ್ನು ಹೊಡೆದ ದಾಖಲೆ ಮಾಡಿದ್ದಾರೆ.
1968ರಲ್ಲಿ ವೆಸ್ಟ್ ಇಂಡೀಸ್ ದಂತಕಥೆ ಗ್ಯಾರಿ ಸೋಬರ್ಸ್ ಪ್ರಮುಖ ಕೌಂಟಿ ಪಂದ್ಯದಲ್ಲಿ ಈ ಸಾಧನೆ ಮಾಡಿದ ಮೊದಲ ವ್ಯಕ್ತಿಯಾಗಿದ್ದಾರೆ. 1985ರಲ್ಲಿ ರವಿಶಾಸ್ತ್ರಿ ಬರೋಡಾ ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ ಆರು ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಎನಿಸಿಕೊಂಡರು.
ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾದ ಹರ್ಶೆಲ್ ಗಿಬ್ಸ್ ಒಂದೇ ಓವರ್ನಲ್ಲಿ 6 ಸಿಕ್ಸರ್ ಬಾರಿಸಿದ ಸಾಧನೆಗೆ ಪಾತ್ರರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.