ADVERTISEMENT

ಕೊಹ್ಲಿ–ಎಬಿಡಿ ಚಿತ್ರಗಳಿಗೆ ಕ್ಷೀರಾಭಿಷೇಕ

ಭಾನುವಾರ 35ನೇ ಜನ್ಮದಿನ ಆಚರಿಸಿಕೊಂಡ ಡಿವಿಲಿಯರ್ಸ್‌

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2019, 20:29 IST
Last Updated 18 ಫೆಬ್ರುವರಿ 2019, 20:29 IST
ಎಬಿ ಡಿವಿಲಿಯರ್ಸ್ ಮತ್ತು ವಿರಾಟ್ ಕೊಹ್ಲಿ –ಪಿಟಿಐ ಚಿತ್ರ
ಎಬಿ ಡಿವಿಲಿಯರ್ಸ್ ಮತ್ತು ವಿರಾಟ್ ಕೊಹ್ಲಿ –ಪಿಟಿಐ ಚಿತ್ರ   

ಬೆಂಗಳೂರು: ಇಂಡಿಯನ್ ಪ್ರೀಮಿ ಯರ್ ಲೀಗ್‌ (ಐಪಿಎಲ್‌) ಸಮೀಪಿಸುತ್ತಿದ್ದಂತೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಅಭಿಮಾನಿಗಳ ಉತ್ಸಾಹ ಇಮ್ಮಡಿಯಾಗಿದೆ.

ನಾಯಕ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್‌ ಎಬಿ ಡಿವಿಲಿಯರ್ಸ್ ಅವರ ಭಾವಚಿತ್ರಕ್ಕೆ ಅವರು ಕ್ಷೀರಾಭಿಷೇಕ ಮಾಡಿದ್ದಾರೆ.

ಭಾನುವಾರ ಎಬಿ ಡಿವಿಲಿಯರ್ಸ್ ಅವರ 35ನೇ ಜನ್ಮದಿನ. ಇದರ ನಿಮಿತ್ತ ಒಂಡೆಡೆ ಸೇರಿದ ಅಭಿಮಾನಿಗಳು ಡಿವಿ ಲಿಯರ್ಸ್ ಮತ್ತು ಕೊಹ್ಲಿ ಜೊತೆಯಾಗಿ ಇರುವ ಚಿತ್ರಕ್ಕೆ ಪ್ಯಾಕೆಟ್ ಹಾಲನ್ನು ಸುರಿದರು. ಈ ವಿಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ADVERTISEMENT

ಕೊಹ್ಲಿ ಮತ್ತು ಡಿವಿಲಿಯರ್ಸ್ ಆರ್‌ಸಿಬಿ ತಂಡದ ಬೆನ್ನೆಲೆಬು. ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಡುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ. ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ 229 ರನ್‌ಗಳ ಜೊತೆಯಾಟದ ಮೂಲಕ ಟೂರ್ನಿಯಲ್ಲಿ ದಾಖಲೆ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.