ಬೆಂಗಳೂರು: ಕನ್ನಡಿಗ ಅಭಿಜಿತ್ ಬೆಂಗೇರಿ ಅವರು ಇರಾನಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಟಿ.ವಿ. ಅಂಪೈರ್ ಆಗಿ ಕಾರ್ಯನಿರ್ವಹಿಸುವರು.
ಧಾರವಾಡ ವಲಯದ ಅಭಿಜಿತ್ ಅವರು ಕೆಲವರ್ಷಗಳಿಂದ ಬಿಸಿಸಿಐ ಪ್ಯಾನೆಲ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತೀಚೆಗೆ ದುಲೀಪ್ ಟ್ರೋಫಿ ಟೂರ್ನಿಯ ಪಂದ್ಯ, ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದರು. ಒಟ್ಟು 22 ಪ್ರಥಮ ದರ್ಜೆ ಪಂದ್ಯಗಳು, 42 ಲಿಸ್ಟ್ ಎ ಹಾಗೂ 57 ಟಿ20 ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ಧಾರೆ.
‘ಪ್ರತಿಷ್ಠಿತ ಟೂರ್ನಿಯಲ್ಲಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿರುವುದು ಸಂತಸವಾಗಿದೆ. ಇರಾನಿ ಟ್ರೋಫಿ ಟೂರ್ನಿಯಲ್ಲಿ ಟಿ.ವಿ. ಅಂಪೈರ್ ಆಗಿ ಕೆಲಸ ಮಾಡುವುದು ಉತ್ತಮ ಅನುಭವವಾಗಲಿದೆ’ ಎಂದು 39 ವರ್ಷದ ಅಭಿಜಿತ್ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.