
ಪಿಟಿಐ
ಕೆಕೆಆರ್ ತಂಡ
ಪಿಟಿಐ ಚಿತ್ರ
ನವದೆಹಲಿ: ಭಾರತ ತಂಡದ ಮಾಜಿ ಸಹಾಯಕ ಕೋಚ್ ಅಭಿಷೇಕ್ ನಾಯರ್ ಅವರನ್ನು ನಿರೀಕ್ಷೆಯಂತೆ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಹೆಡ್ ಕೋಚ್ ಆಗಿ ನೇಮಕ ಮಾಡಿದೆ.
ಮೂರು ಋತುಗಳ ಕಾಲ ಹೆಡ್ ಕೋಚ್ ಆಗಿದ್ದ ಚಂದ್ರಕಾಂತ್ ಪಂಡಿತ್ ಅವರ ಸ್ಥಾನಕ್ಕೆ ನಾಯರ್ ನೇಮಕಗೊಂಡಿದ್ದಾರೆ.
2018ರಿಂದ ನಾಯರ್ ಅವರು ಕೆಕೆಆರ್ ಜೊತೆ ತರಬೇತಿ ಸಿಬ್ಬಂದಿಯಾಗಿ ಗುರುತಿಸಿಕೊಂಡಿದ್ದರು. ರಾಷ್ಟ್ರೀಯ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಜೊತೆ ಅವರು 9 ತಿಂಗಳ ಕಾಲ ಸಹಾಯಕ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಅವರನ್ನು ತಂಡದಿಂದ ತೆಗೆದುಹಾಕಲಾಗಿತ್ತು. ಅವರ ಸ್ಥಾನದಲ್ಲಿ ಸಿತಾಂಶು ಕೊಟಕ್ ಅವರನ್ನು ನೇಮಕ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.