ನವದೆಹಲಿ: ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ಮಾಜಿ ಕ್ರಿಕೆಟಿಗ ಹಾಗೂ ಅವರ ಗುರು ಯುವರಾಜ್ ಸಿಂಗ್ ಪರಂಪರೆಯನ್ನು ಮುಂದುವರಿಸುತ್ತಾರೆ ಎಂದು ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಭಾನುವಾರ(ಸೆ.21)ರಂದು ಪಾಕಿಸ್ತಾನ ವಿರುದ್ಧ ನಡೆದ ಸೂಪರ್–4 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರು ಕೇವಲ 39 ಎಸೆತಗಳಲ್ಲಿ 74 ರನ್‌ಗಳಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
‘23 ವರ್ಷದ ಅಭಿಷೇಕ್ ಶರ್ಮಾ ಅವರ ಕ್ರಿಕೆಟ್ ಜೀವನದ ಆರಂಭವಷ್ಟೇ. ಅವರಿಗೆ ಉತ್ತಮ ಭವಿಷ್ಯವಿದೆ. ಅವರು ಸೀಮಿತ ಓವರ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಆಟಗಾರರಾಗಿದ್ದು, ಕ್ರಿಕೆಟ್ ಜಗತ್ತಿನಲ್ಲಿ ತಮ್ಮ ಛಾಪು ಮೂಡಿಸಲಿದ್ದಾರೆ’ ಎಂದು ಅಶ್ವಿನ್ ಅವರು ತಮ್ಮ ಯ್ಯೂಟೂಬ್ ಚಾನಲ್‌ನಲ್ಲಿ ಹೇಳಿಕೊಂಡಿದ್ದಾರೆ.
‘ಅಭಿಷೇಕ್ ಶರ್ಮಾ ಅದ್ಬುತ ಸಾಮರ್ಥ್ಯ ಹೊಂದಿದ್ದಾರೆ. ಯುವರಾಜ್ ಸಿಂಗ್ ಹಾಗೆಯೇ ಸೀಮಿತ ಓವರ್ ಕ್ರಿಕೆಟ್‌ನಲ್ಲಿ ಭಾರತ ತಂಡಕ್ಕೆ ಆಸ್ತಿಯಾಗಲಿದ್ದಾರೆ’ ಎಂದು ಅಶ್ವಿನ್ ಅವರು ಹೊಗಳಿದ್ದಾರೆ.
ಏಷ್ಯಾ ಕಪ್‌ನಲ್ಲಿ 4 ಪಂದ್ಯಗಳಿಂದ 173 ರನ್‌ಗಳಿಸಿರುವ ಅಭಿಷೇಕ್ ಶರ್ಮಾ, ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.