
ಕೊಲಂಬೊ: ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಅಭಿಷೇಕ್ ಶರ್ಮಾ ಅವರು ಚೇತರಿಸಿಕೊಂಡಿದ್ದು, ಶನಿವಾರ ನೆಟ್ಸ್‌ನಲ್ಲಿ ಅಭ್ಯಾಸ ಮಾಡಿದ್ದಾರೆ.
ಸ್ಫೋಟಕ ಆರಂಭ ಆಟಗಾರ ಅಭಿಷೇಕ್, ಇತ್ತೀಚೆಗೆ ಅನಾರೋಗ್ಯದ ಕಾರಣ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದರು. ನಮೀಬಿಯಾ ವಿರುದ್ಧದ ಪಂದ್ಯವನ್ನು ಆಡಿರಲಿಲ್ಲ. ಹಾಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಅವರು ಆಡುವುದು ಅನುಮಾನವಾಗಿತ್ತು. ಇದೀಗ ಅವರು ಚೇತರಿಸಿಕೊಂಡಿದ್ದಾರೆ.
ಎಡಗೈ ಬ್ಯಾಟರ್ ಅಭಿಷೇಕ್ ಶರ್ಮಾ ಅವರು ಶನಿವಾರ ಸುಮಾರು 30 ನಿಮಿಷಕ್ಕೂ ಅಧಿಕ ಕಾಲ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡಿದ್ದಾರೆ. ಪಾಕ್ ಸ್ಪಿನ್ ದಾಳಿಯನ್ನು ಎದುರಿಸುವ ನಿಟ್ಟಿನಲ್ಲಿ ನೆಟ್ಸ್‌ನಲ್ಲಿ ಭಾರತದ ಸ್ಪಿನ್ನರ್‌ಗಳಾದ ಕುಲದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ಅವರ ಬೌಲಿಂಗ್‌ಗೆ ಅಭ್ಯಾಸ ನಡೆಸಿದರು.
ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ಪಾಕ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.
ಆರಂಭಿಕ ಆಟಗಾರ ಇಶಾನ್ ಕಿಶನ್ ಉತ್ತಮ ಲಯದಲ್ಲಿದ್ದು, ಅಭಿಷೇಕ್ ಶರ್ಮಾ ತಂಡವನ್ನು ಕೂಡಿಕೊಂಡರೆ ಮತ್ತೊಬ್ಬ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಅವರು ಹೊರಗುಳಿಯುವ ಸಾಧ್ಯತೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.