ADVERTISEMENT

ಸ್ವಾಭಾವಿಕ ಆಟದಿಂದಲೇ ಅಭಿಷೇಕ್‌ ಶರ್ಮಾ ಮಿಂಚುತ್ತಿದ್ದಾರೆ: ಸನತ್‌ ಜಯಸೂರ್ಯ

ಪಿಟಿಐ
Published 27 ಸೆಪ್ಟೆಂಬರ್ 2025, 9:32 IST
Last Updated 27 ಸೆಪ್ಟೆಂಬರ್ 2025, 9:32 IST
   

ದುಬೈ: ಭಾರತದ ಆರಂಭಿಕ ಆಟಗಾರ ಅಭಿಷೇಕ್‌ ಶರ್ಮಾ ಅವರು ಸ್ವಾಭಾವಿಕ ಆಟದಿಂದಾಗಿಯೇ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಶ್ರೀಲಂಕಾ ಕೋಚ್ ಹಾಗೂ ಮಾಜಿ ಕ್ರಿಕೆಟಿಗ ಸನತ್‌ ಜಯಸೂರ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.

25 ವರ್ಷದ ಯುವ ಆಟಗಾರ ಅಭಿಷೇಕ್‌ ಶರ್ಮಾ ಅವರು ದಿಗ್ಗಜ ಕ್ರಿಕೆಟಿಗ ಸನತ್‌ ಜಯಸೂರ್ಯ ರೀತಿಯ ಬ್ಯಾಟಿಂಗ್‌ ಶೈಲಿಯಲ್ಲಿ ಆಡುತ್ತಿದ್ದಾರೆ ಎಂದು ಕ್ರಿಕೆಟ್‌ ವಲಯದಲ್ಲಿ ಚರ್ಚೆಗಳಾಗುತ್ತಿವೆ.

ಅಭಿಷೇಕ್‌ ಶರ್ಮಾ ಅವರ ಬ್ಯಾಟಿಂಗ್‌ ಶೈಲಿಯ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸನತ್‌ ಜಯಸೂರ್ಯ, ‘ಅವರಿಗೆ ತಮ್ಮ ಸ್ವಾಭಾವಿಕ ಆಟವನ್ನು ಆಡಲು ನಾಯಕ ಹಾಗೂ ಕೋಚ್‌ ಉತ್ತೇಜನ ನೀಡುತ್ತಿದ್ದಾರೆ. ಹಾಗಾಗಿ ಅವರು ಸ್ಫೋಟಕ ಆಟವನ್ನು ಆಡಲು ಸಾಧ್ಯವಾಗುತ್ತಿದೆ’ ಎಂದು ಹೇಳಿದ್ದಾರೆ.

ADVERTISEMENT

‘ಅಭಿಷೇಕ್‌ ಶರ್ಮಾ ಅವರು ಸ್ಫೋಟಕ ಆಟದ ಜೊತೆಗೆ ಪಂದ್ಯಕ್ಕೆ ತಕ್ಕಂತೆ ತಮ್ಮ ಬ್ಯಾಟಿಂಗ್‌ ಶೈಲಿಯನ್ನು ಅಳವಡಿಸಿಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ. ಹಾಗಾಗಿ ಪಂದ್ಯದಿಂದ ಪಂದ್ಯಕ್ಕೆ ಅವರ ಆಟವು ಉತ್ತಮಗೊಳ್ಳುತ್ತಿದೆ’ ಎಂದಿದ್ದಾರೆ.

ಈ ಬಾರಿಯ ಏಷ್ಯಾ ಕಪ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಭಿಷೇಕ್‌ ಶರ್ಮಾ ಅವರು ಮೊದಲ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.