
ಮೆಲ್ಬೊರ್ನ್: ಆಸ್ಟ್ರೇಲಿಯಾ ತಂಡದ ಪ್ರಮುಖ ಸ್ಪಿನ್ನರ್ ಆ್ಯಡಂ ಜಂಪಾ ಅವರು ವೈಯಕ್ತಿಕ ಕಾರಣದಿಂದಾಗಿ ಭಾರತ ವಿರುದ್ಧದ ಐದು ಪಂದ್ಯಗಳ ಟಿ–20 ಸರಣಿಯ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಬುಧವಾರದಿಂದ(ಅ.29) ಸರಣಿ ಆರಂಭವಾಗಲಿದ್ದು, ಕ್ಯಾನ್‌ಬೆರಾದಲ್ಲಿ ಮೊದಲ ಪಂದ್ಯ ನಡೆಯಲಿದೆ.
ಆ್ಯಡಂ ಜಂಪಾ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹಾಗಾಗಿ, ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರ ಜಾಗಕ್ಕೆ ಮತ್ತೊಬ್ಬ ಯುವ ಸ್ಪಿನ್ನರ್ ತನ್ವಿರ್ ಸಂಘಾ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.
ಗಾಯದ ಕಾರಣದಿಂದಾಗಿ ಭಾರತ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಿಂದಲೂ ಆ್ಯಡಂ ಜಂಪಾ ಅವರು ಹೊರಗುಳಿದಿದ್ದರು.
ಆಸ್ಟ್ರೇಲಿಯಾ ಪರ 7 ಟಿ–20 ಪಂದ್ಯಗಳನ್ನು ಆಡಿರುವ 23 ವರ್ಷದ ತನ್ವಿರ್ ಸಂಘಾ, 10 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 2023 ರಿಂದ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿರದ ಸಂಘಾ, ಆಸ್ಟ್ರೇಲಿಯಾ ಎ ಹಾಗೂ ಬಿಬಿಎಲ್ ಟೂರ್ನಿಯಲ್ಲಿ ಮಿಂಚಿದ್ದರು.
ಭಾರತ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ 3 ಪಂದ್ಯಗಳ ಏಕದಿನ ಸರಣಿಯನ್ನು 2–1 ರಿಂದ ಆಸ್ಟ್ರೇಲಿಯಾ ವಶಪಡಿಸಿಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.