ನವದೆಹಲಿ: ಇದೇ 22ರಿಂದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟಿ–20 ಪಂದ್ಯಾವಳಿಯು ಆರಂಭವಾಗುತ್ತಿದ್ದು, ಭಾರತದ ಬ್ಯಾಟರ್ ಅಜಿಂಕ್ಯ ರಹಾನೆ ಅವರನ್ನು ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕರಾಗಿ ನೇಮಕ ಮಾಡಲಾಗಿದೆ.
ಈ ಕುರಿತಂತೆ ಇಂದು ಫ್ರಾಂಚೈಸಿ ಪ್ರಕಟಣೆ ಬಿಡುಗಡೆ ಮಾಡಿದೆ.
ಕಳೆದ ಬಾರಿ ತಂಡ ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್ ಅವರ ಸ್ಥಾನಕ್ಕೆ ರಹಾನೆ ಅವರನ್ನು ನೇಮಕ ಮಾಡಲಾಗಿದ್ದು, ಈ ಋತುವಿನಲ್ಲಿ ಅಯ್ಯರ್ ಪಂಜಾಬ್ ಕಿಂಗ್ಸ್ ಅನ್ನು ಮುನ್ನಡೆಸುತ್ತಿದ್ದಾರೆ.
ದೀರ್ಘಕಾಲದಿಂದ ಕೆಕೆಆರ್ ತಂಡದಲ್ಲಿರುವ ವೆಂಕಟೇಶ್ ಅಯ್ಯರ್ ಅವರನ್ನು ಉಪನಾಯಕರನ್ನಾಗಿ ನೇಮಕ ಮಾಡಲಾಗಿದೆ.
‘ಐಪಿಎಲ್‌ನಲ್ಲಿ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾಗಿರುವ ಕೆಕೆಆರ್ ಅನ್ನು ಮುನ್ನಡೆಸುವ ಜವಾಬ್ದಾರಿ ನೀಡಿರುವುದು ಗೌರವದ ಸಂಗತಿ. ನಮ್ಮಲ್ಲಿ ಅತ್ಯುತ್ತಮ ಮತ್ತು ಸಮತೋಲಿತ ತಂಡವಿದೆ ಎಂದು ನಾನು ಭಾವಿಸುತ್ತೇನೆ. ಎಲ್ಲರೊಂದಿಗೆ ಕೆಲಸ ಮಾಡಲು ಮತ್ತು ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಸವಾಲನ್ನು ಸ್ವೀಕರಿಸಲು ನಾನು ಎದುರು ನೋಡುತ್ತಿದ್ದೇನೆ’ಎಂದು ರಹಾನೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 22ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.