ADVERTISEMENT

ಮುಂಬರುವ WPLನಲ್ಲಿ ಆರ್‌ಸಿಬಿ ‍ಪರ ಕಣಕ್ಕಿಳಿಯುತ್ತಾರಾ ಅನಯಾ ಬಂಗಾರ್?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ನವೆಂಬರ್ 2025, 8:07 IST
Last Updated 10 ನವೆಂಬರ್ 2025, 8:07 IST
<div class="paragraphs"><p>ಅನಯಾ ಬಂಗಾರ್&nbsp;</p></div>

ಅನಯಾ ಬಂಗಾರ್ 

   

ಚಿತ್ರ ಕೃಪೆ: ಇನ್‌ಸ್ಟಾಗ್ರಾಂ

ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಅವರ ಪುತ್ರಿ ಅನಯ ಬಂಗಾರ್ ಅವರು ಮುಂಬರುವ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ((WPL) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕಣಕ್ಕಿಳಿಯಲಿದ್ದಾರಾ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.

ADVERTISEMENT

ಅವರು ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಆರ್‌ಸಿಬಿ ಕ್ರಿಕೆಟ್‌ ಕಿಟ್‌ನ ಬ್ಯಾಗ್‌ ಜೊತೆ ಮೈದಾನದಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಆರ್‌ಸಿಬಿ ಅಭಿಮಾನಿಗಳು ಅನಯಾ ಆರ್‌ಸಿಬಿ ಮಹಿಳಾ ತಂಡವನ್ನು ಸೇರುತ್ತಾರಾ ಎಂದು ಪ್ರಶ್ನಿಸುತ್ತಿದ್ದಾರೆ.

ಅನಯಾ ತನ್ನ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ‘ಈ ಬಾರಿ ಆರ್ಯನ್ ಆಗಿ ಅಲ್ಲ, ಅನಯಾ ಆಗಿ’ ಮತ್ತೆ ಮೈದಾನಕ್ಕೆ ಇಳಿಯಲಿದ್ದೇನೆ ಎಂದು ಕಳೆದ ಕೆಲ ದಿನಗಳ ಹಿಂದೆ ಹೇಳಿಕೊಂಡಿದ್ದರು.

ರೈಸ್ ಅಂಡ್ ಫಾಲ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ, ತಾವು ಬಹಳ ಸಮಯದಿಂದ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವ ಬಗ್ಗೆ ಉತ್ಸಾಹ ಹೊಂದಿರುವುದಾಗಿ ಹೇಳಿಕೊಂಡಿದ್ದರು. ‘ನಾನು ನನ್ನ ಹಕ್ಕುಗಳಿಗಾಗಿ ಹೋರಾಡುತ್ತೇನೆ ಮತ್ತು ಒಂದು ದಿನ ನಾನು ಭಾರತಕ್ಕಾಗಿ ವಿಶ್ವಕಪ್ ಗೆಲ್ಲುತ್ತೇನೆ’ ಎಂದು ಹೇಳಿದ್ದರು.

ಅನಯ ಅವರ ಇತ್ತೀಚಿನ ಪೋಸ್ಟ್, ವೃತ್ತಿಪರ ಕ್ರಿಕೆಟ್‌ಗೆ ಅವರ ಮರಳುವಿಕೆಯ ಮತ್ತಷ್ಟು ಪುಷ್ಟಿ ನೀಡಿದೆ. ಆದರೆ ಐಸಿಸಿ ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಿಂದ ಲಿಂಗತ್ವ ಅಲ್ಪಸಂಖ್ಯಾತ ಆಟಗಾರರು ಆಡುವುದನ್ನು ನಿಷೇಧಿಸಿದೆ.

ಈ ವರ್ಷದ ಆರಂಭದಲ್ಲಿ ಲಲ್ಲಂಟಾಪ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಅನಯಾ, ತನ್ನ ಕುಟುಂಬದೊಂದಿಗಿನ ಸಂಬಂಧದ ಬಗ್ಗೆ ಮಾತನಾಡುತ್ತಾ, ವಿಶೇಷವಾಗಿ ತಮ್ಮ ತಂದೆ, ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್, ‘ಭವಿಷ್ಯದ ಕ್ರಿಕೆಟ್‌ನಲ್ಲಿ ತನಗೆ ಯಾವುದೇ ಸ್ಥಾನ ಸಿಗುವುದಿಲ್ಲ’ ಎಂದು ಹೇಳಿರುವುದಾಗಿ ತಿಳಿಸಿದ್ದರು. ಮಾತ್ರವಲ್ಲ, ತಾನು ಕೂಡ ತಂದೆಯ ಮಾತನ್ನು ಒಪ್ಪಿಕೊಳ್ಳುವುದಾಗಿ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.