ಕಿಂಗ್ಸ್ಟನ್: ವೃತ್ತಿಜೀವನದ ಕೊನೆಯ ಅಂತರರಾಷ್ಟ್ರೀಯ ಪಂದ್ಯ ಆಡುತ್ತಿರುವ ಹಿರಿಯ ಆಲ್‌ರೌಂಡರ್ ಆ್ಯಂಡ್ರೆ ರಸೆಲ್ ಅವರಿಗೆ ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ಆಟಗಾರರು ಪಂದ್ಯಕ್ಕೂ ಮೊದಲು ‘ಗಾರ್ಡ್ ಆಫ್ ಆನರ್’ ಸಲ್ಲಿಸಿದ್ದಾರೆ.
ಜುಲೈ 17ರಂದು 37 ವರ್ಷದ ಆ್ಯಂಡ್ರೆ ರಸೆಲ್ ಅವರು ತಮ್ಮ 15 ವರ್ಷಗಳ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ–20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆ್ಯಂಡ್ರೆ ರಸೆಲ್ ಕಣಕ್ಕಿಳಿದಿದ್ದರು. ಅವರ ತವರು ಮೈದಾನ ಜಮೈಕಾದ ಸಬೀನಾ ಪಾರ್ಕ್ ಕ್ರೀಡಾಂಗಣದಲ್ಲಿ ಕೊನೆಯ ಬಾರಿಗೆ ಅಂತರರಾಷ್ಟ್ರೀಯ ಪಂದ್ಯ ಆಡುವ ಮೂಲಕ ವಿದಾಯ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ದದ ಎರಡನೇ ಟಿ–20 ಪಂದ್ಯದಲ್ಲಿ 15 ಎಸೆತಗಳಲ್ಲಿ 36 ರನ್‌ಗಳಿಸಿ ಔಟ್ ಆದ ಬಳಿಕ ಪೆವಿಲಿಯನ್‌ಗೆ ಹಿಂತಿರುಗುತ್ತಿದ್ದ ವೇಳೆಯಲ್ಲಿ ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರು ಎದ್ದುನಿಂತು ಚಪ್ಪಾಳೆ ತಟ್ಟುವ ಮೂಲಕ ತವರಿನ ಆಟಗಾರನಿಗೆ ಗೌರವ ಸಲ್ಲಿಸಿದ್ದಾರೆ.
ಆ್ಯಂಡ್ರೆ ರಸೆಲ್ ಅವರು 2012 ಹಾಗೂ 2016ರಲ್ಲಿ ಟಿ–20 ವಿಶ್ವಕಪ್ ಗೆದ್ದ ವೆಸ್ಟ್‌ಇಂಡೀಸ್ ತಂಡದ ಭಾಗವಾಗಿದ್ದರು. ವಿಂಡೀಸ್ ಪರವಾಗಿ 141 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.