ADVERTISEMENT

48ನೇ ವಸಂತಕ್ಕೆ ಕಾಲಿಟ್ಟ ಅನಿಲ್‌ ಕುಂಬ್ಳೆ: ಶುಭಾಶಯಗಳ ಮಹಾಪೂರ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2018, 10:16 IST
Last Updated 17 ಅಕ್ಟೋಬರ್ 2018, 10:16 IST
ಅನಿಲ್‌ ಕುಂಬ್ಳೆ
ಅನಿಲ್‌ ಕುಂಬ್ಳೆ   

ಬೆಂಗಳೂರು: ಭಾರತದ ಸ್ಪಿನ್‌ ಮಾಂತ್ರಿಕ ಅನಿಲ್‌ ಕುಂಬ್ಳೆ ಅವರು ಬುಧವಾರ 48ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಅಂತರರಾಷ್ಟ್ರೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಐಸಿಸಿ), ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ), ಹಿರಿಯ ಆಟಗಾರರು ಕೂಡ ಶುಭ ಹಾರೈಸಿದ್ದಾರೆ.

ADVERTISEMENT

ವಿಶ್ವದ ಹೆಚ್ಚು ವಿಕೆಟ್‌ ಕಬಳಿಸಿದ ಭಾರತೀಯ ಕ್ರಿಕೆಟಿಗ ಅನಿಲ್‌ ಕುಂಬ್ಳೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಐಸಿಸಿ ಟ್ವೀಟ್‌ ಮಾಡಿದೆ.

ಇಂದು ಭಾರತ ಕ್ರಿಕಟ್‌ ತಂಡದಮಾಜಿ ನಾಯಕನ ಹುಟ್ಟುಹಬ್ಬ ಎಂದು ಬಿಬಿಸಿಐ ಟ್ವೀಟ್‌ ಮಾಡಿದೆ.

ಪ್ರೀತಿಯ ಸ್ನೇಹಿತ, ಚಾಂಪಿಯನ್‌ಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಸಚಿನ್‌ ತೆಂಡೂಲ್ಕರ್‌ ಟ್ವೀಟ್‌ ಮಾಡಿದ್ದಾರೆ.

ಅನೇಕ ಪಂದ್ಯಗಳನ್ನು ಗೆಲ್ಲಿಸಿದ್ದ ಭಾರತದ ಅತ್ಯಂತ ಶ್ರೇಷ್ಠ ಆಟಗಾರನಿಗೆ ಹುಟ್ಟುಹಬ್ಬದ ಶುಭ ಹಾರೈಕೆಗಳು ಎಂದು ವಿರೇಂದ್ರ ಸೆಹ್ವಾಗ್‌ ಟ್ವೀಟ್‌ ಮಾಡಿದ್ದಾರೆ.

ನನ್ನ ತಂಡದ ಸದಸ್ಯ, ಸ್ಫೂರ್ತಿದಾಯಕ ವ್ಯಕ್ತಿತ್ವದ ನಿಮಗೆ ಜನ್ಮದಿನದ ಶುಭಾಶಯಗಳು ಎಂದು ಕ್ರಿಕೆಟಿಗ ಹರ್ಭಜನ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

ಕುಂಬ್ಳೆ ಬಾಯ್‌, ನೀವು ಎಲ್ಲರಿಗೂ ಸ್ಫೂರ್ತಿದಾಯಕ ವ್ಯಕ್ತಿ. ನೀವು ಸದಾ ಸಂತೋಷದಿಂದ ಇರುತ್ತೀರಿ ಎಂದು ನಾನು ಭಾವಿಸಿದ್ದೇನೆ ಎಂದು ಶಿಖರ್‌ ಧವನ್‌ ಹೇಳಿದ್ದಾರೆ.

*

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.