ADVERTISEMENT

IPL 2022: ಮಗದೋರ್ವ ಡೆಲ್ಲಿ ಆಟಗಾರನಿಗೆ ಕೋವಿಡ್: ವರದಿ

ಐಎಎನ್ಎಸ್
Published 20 ಏಪ್ರಿಲ್ 2022, 13:13 IST
Last Updated 20 ಏಪ್ರಿಲ್ 2022, 13:13 IST
ಮಿಚೆಲ್ ಮಾರ್ಷ್
ಮಿಚೆಲ್ ಮಾರ್ಷ್   

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಗದೋರ್ವ ಆಟಗಾರನಿಗೆ ಕೋವಿಡ್ ದೃಢಪಟ್ಟಿದೆ ಎಂದು ವರದಿಯಾಗಿದೆ. ಇದರಿಂದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಮೇಲೆ ಆತಂಕ ಮಡುಗಟ್ಟಿದೆ.

ಇಂದು(ಬುಧವಾರ)ಮುಂಬೈನ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಪಂದ್ಯ ನಿಗದಿಯಾಗಿದೆ. ಈ ನಡುವೆ ಡೆಲ್ಲಿ ಪಾಳಯದಲ್ಲಿ ಮಗದೊಂದು ಕೋವಿಡ್ ಪ್ರಕರಣ ಬೆಳಕಿಗೆ ಬಂದಿದೆ.

'ಇಎಸ್‌ಪಿಎನ್ ಕ್ರಿಕ್‌ಇನ್ಫೋ' ವರದಿ ಪ್ರಕಾರ, ಬುಧವಾರ ಬೆಳಿಗ್ಗೆ ನಡೆಸಲಾದ ರ್‍ಯಾಪಿಡ್‌ ಆ್ಯಂಟಿಜೆನ್ ಟೆಸ್ಟ್‌‌ನಲ್ಲಿ ಡೆಲ್ಲಿ ತಂಡದ ಮಗದೋರ್ವ ವಿದೇಶಿ ಆಟಗಾರನಲ್ಲಿ ಸೋಂಕು ಪತ್ತೆಯಾಗಿದೆ.

ಪಂದ್ಯ ನಿಗದಿಯಂತೆ ನಡೆಯಲಿದೆ: ಬಿಸಿಸಿಐ

ಈ ನಡುವೆ ಆಟಗಾರರಿಗೆ ಎರಡು ಸುತ್ತಿನ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಡೆಲ್ಲಿ ಹಾಗೂ ಪಂಜಾಬ್ ನಡುವಣ ಪಂದ್ಯ ನಿಗದಿಯಂತೆ ನಡೆಯಲಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೊದಲು ಮಿಚೆಲ್ ಮಾರ್ಷ್ ಸೇರಿದಂತೆ ಡೆಲ್ಲಿಯ ತಂಡದ ಐವರು ಸಿಬ್ಬಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದರಿಂದ ಪಂದ್ಯವನ್ನು ಪುಣೆಯಿಂದ ಮುಂಬೈಗೆ ಸ್ಥಳಾಂತರಿಸಲಾಗಿತ್ತು.

ಡೆಲ್ಲಿ ತಂಡದ ಆಟಗಾರ ಮಿಚೆಲ್ ಮಾರ್ಷ್, ಫಿಸಿಯೊ ಪ್ಯಾಟ್ರಿಕ್ ಫರ್ಹಾಟ್, ಮಸಾಜ್ ತಜ್ಞ ಚೇತನ್ ಕುಮಾರ್, ವೈದ್ಯ ಅಭಿಜಿತ್ ಸಾಳ್ವಿ ಮತ್ತು ಸಾಮಾಜಿಕ ಜಾಲತಾಣ ನಿರ್ವಾಹಕ ತಂಡದ ಸದಸ್ಯ ಆಕಾಶ್ ಮಾನೆ ಅವರು ಸೋಂಕಿತರಾಗಿದ್ದು, ಪ್ರತ್ಯೇಕವಾಸದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.