ADVERTISEMENT

ಬಿಸಿಸಿಐ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2022, 17:27 IST
Last Updated 20 ಜುಲೈ 2022, 17:27 IST
ಸೌರವ್ ಗಂಗೂಲಿ ಮತ್ತು ಜಯ್ ಶಾ
ಸೌರವ್ ಗಂಗೂಲಿ ಮತ್ತು ಜಯ್ ಶಾ   

ನವದೆಹಲಿ: ನಿವೃತ್ತ ನ್ಯಾಯಮೂರ್ತಿ ಆರ್‌.ಎಂ. ಲೋಧಾ ಶಿಫಾರಸುಗಳ ಅನ್ವಯ ರೂಪಿಸಿ, ಜಾರಿಗೊಳಿಸಲಾದ ನಿಯಮಾವಳಿಯ ಪರಿಷ್ಕರಣೆಗೆ ಕೋರಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿತು.

ಮುಖ್ಯ ನ್ಯಾಯಮೂರ್ತಿ ಎನ್‌. ವಿ. ರಮಣ, ಜಸ್ಟಿಸ್ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಗುರುವಾರ ಈ ಮೇಲ್ಮನವಿಯ ವಿಚಾರಣೆ ನಡೆಸಲಿದೆ.

ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಇನ್ನೂ ಕೆಲವು ಪದಾಧಿಕಾರಿಗಳ ಅಧಿಕಾರಾವಧಿಯ ಕುರಿತು ಇರುವ ನಿಯಮವನ್ನು ಪರಿಷ್ಕರಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ.

ADVERTISEMENT

‘ಪದಾಧಿಕಾರಿಗಳು ತಮ್ಮ ಅಧಿಕಾರದ ಅವಧಿಯು ಮುಗಿದಿದ್ದರೂ ಮುಂದುವರಿದಿದ್ದಾರೆ’ ಎಂದು ಬಿಹಾರ ಕ್ರಿಕೆಟ್ ಸಂಸ್ಥೆ ಪರ ವಕೀಲರು ವಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.