
ಸಾನಿಯಾ ಚಂದೋಕ್ ಮತ್ತು ಅರ್ಜುನ್ ತೆಂಡೂಲ್ಕರ್
ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಂದೋಕ್ ಜತೆಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. 2025ರ ಆಗಸ್ಟ್‌ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಜೋಡಿಯ ನಿಶ್ಚಿತಾರ್ಥ ನೆರವೇರಿತ್ತು.
27 ವರ್ಷದ ಸಾನಿಯಾ ಚಂದೋಕ್ ಮುಂಬೈ ಮೂಲದ ಉದ್ಯಮಿಯಾಗಿದ್ದಾರೆ. ಇವರು ಮುಂಬೈನ ಪ್ರಮುಖ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಘಾಯ್ ಕುಟುಂಬವು ಮುಂಬೈನಲ್ಲಿ ಹೋಟೆಲ್ ಉದ್ಯಮವನ್ನು ನಡೆಸುತ್ತಿದೆ. ‘ಇಂಟರ್ ಕಾಂಟಿನೆಂಟಲ್ ಮೆರೈನ್ ಡ್ರೈವ್ ಹೋಟೆಲ್’ ಮತ್ತು ಜನಪ್ರಿಯ ‘ಬ್ರೂಕ್ಲಿನ್ ಕ್ರೀಮರಿ’ ಐಸ್ ಕ್ರೀಮ್ ಬ್ರ್ಯಾಂಡ್ ಘಾಯ್ ಕುಟುಂಬಕ್ಕೆ ಸೇರಿದೆ.
ಸಾನಿಯಾ ಅವರು ‘ಮಿ.ಪಾವ್ಸ್ ಪೆಟ್ ಸ್ಪಾ’ ಕಂಪನಿಯ ಸ್ಥಾಪಕರಾಗಿದ್ದಾರೆ. ಇವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಪದವಿ ಪಡೆದಿದ್ದು, ವರ್ಲ್ಡ್‌ವೈಡ್ ವೆಟರ್ನರಿ ಸರ್ವೀಸ್‌ನಿಂದ ಪಶುವೈದ್ಯಕೀಯ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಪದವಿಯನ್ನೂ ಪಡೆದಿದ್ದಾರೆ.
26 ವರ್ಷದ ಅರ್ಜುನ್ ತೆಂಡೂಲ್ಕರ್ ಕೂಡ ತಂದೆಯಂತೆಯೇ ಕ್ರಿಕೆಟಿಗರಾಗಿದ್ದಾರೆ. ರಣಜಿಯಲ್ಲಿ ಗೋವಾ ತಂಡದಲ್ಲಿ ಮತ್ತು ಐಪಿಎಲ್‌ನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದಲ್ಲಿ ಆಡಿದ್ದರು.
ವಿಶೇಷ ಎಂದರೆ ಅಂಜಲಿ ತೆಂಡೂಲ್ಕರ್ ಅವರು, ಸಚಿನ್ ಅವರಿಗಿಂತ ಆರು ವರ್ಷ ದೊಡ್ಡವರು. ಅರ್ಜುನ್ ಕೂಡಾ ತಮ್ಮ ತಂದೆಯಂತೆಯೇ ತಮಗಿಂತ ವಯಸ್ಸಿನಲ್ಲಿ ಹಿರಿಯ ಯುವತಿಯನ್ನು ವರಿಸುತ್ತಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಸಚಿನ್ ಕುಟುಂಬ ಮದುವೆಗೆ ಆಮಂತ್ರಣ ಪತ್ರಿಕೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.