
ಕ್ರಿಕೆಟ್
(ಸಾಂಕೇತಿಕ ಚಿತ್ರ)
ಪರ್ತ್: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಆ್ಯಷಸ್ ಸರಣಿಯ ಮೊದಲ ಟೆಸ್ಟ್ ಶುಕ್ರವಾರ ಆರಂಭವಾಗಲಿದೆ. ದಶಕಗಳ ಬಳಿಕ ಸರಣಿ ಜಯಿಸುವತ್ತ ಇಂಗ್ಲೆಂಡ್ ತಂಡ ಚಿತ್ತ ಹರಿಸಿದೆ.
ಎರಡು ವರ್ಷಗಳ ಹಿಂದೆ ಓವಲ್‌ನಲ್ಲಿ ನಡೆದ ಐದನೇ ಟೆಸ್ಟ್ ಪಂದ್ಯವನ್ನು ಬೆನ್ ಸ್ಟೋಕ್ಸ್ ನಾಯಕತ್ವದ ತಂಡವು 49 ರನ್‌ಗಳಿಂದ ಜಯಿಸಿತ್ತು. ಆದರೆ, ತವರಿನಲ್ಲಿ ಸರಣಿಯನ್ನು ವಶಮಾಡಿಕೊಳ್ಳಲು ಇಂಗ್ಲೆಂಡ್‌ಗೆ ಸಾಧ್ಯವಾಗಿರಲಿಲ್ಲ. ಆ ಸರಣಿಯು 2–2ರಿಂದ ಸಮಬಲಗೊಂಡಿತ್ತು.
ಮತ್ತೊಂದೆಡೆ ಪ್ರಬಲ ಆಸ್ಟ್ರೇಲಿಯಾ ತಂಡವು 2010–11ರಿಂದ ತವರಿನಲ್ಲಿ ಅಜೇಯ ಓಟವನ್ನು ಮುಂದುವರಿಸಿದೆ.
ನಾಯಕ ಪ್ಯಾಟ್ ಕಮಿನ್ಸ್ ಮತ್ತು ವೇಗಿ ಜೋಶ್ ಹ್ಯಾಜಲ್‌ವುಡ್ ಅವರು ಗಾಯದ ಕಾರಣದಿಂದಾಗಿ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. 31 ವರ್ಷದ ವೇಗಿ ಬ್ರೆಂಡನ್ ಡಾಗೆಟ್ ಮತ್ತು ಎಡಗೈ ಬ್ಯಾಟರ್ ಜೇಕ್ ವೀಥರಾಲ್ಡ್ (31 ವರ್ಷ) ಅವರು ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.