
ಜೋ ರೂಟ್, ಹ್ಯಾರಿ ಬ್ರೂಕ್
(ಚಿತ್ರ ಕೃಪೆ: X/@englandcricket)
ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿರುವ ಆ್ಯಷಸ್ ಟೆಸ್ಟ್ ಸರಣಿಯ ಐದನೇ ಹಾಗೂ ಅಂತಿಮ ಪಂದ್ಯದ ಮೊದಲ ದಿನದಾಟದಲ್ಲಿ ಮಳೆಯಿಂದಾಗಿ ಅಡಚಣೆಯಾಗಿದೆ.
ಈ ನಡುವೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿರುವ ಇಂಗ್ಲೆಂಡ್, ಮೊದಲ ದಿನದಂತ್ಯಕ್ಕೆ 45 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿದೆ.
ಆಂಗ್ಲರ ಆರಂಭ ಉತ್ತಮವಾಗಿರಲಿಲ್ಲ. 57 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಜಾಕ್ ಕ್ರಾಲಿ 16, ಬೆನ್ ಡಕೆಟ್ 27 ಮತ್ತು ಜೇಕಬ್ ಬೆಥೆಲ್ 10 ರನ್ ಗಳಿಸಿ ಔಟ್ ಆದರು.
ಈ ಹಂತದಲ್ಲಿ ಜೊತೆಗೂಡಿದ ಜೋ ರೂಟ್ ಹಾಗೂ ಹ್ಯಾರಿ ಬ್ರೂಕ್ ಮುರಿಯದ ನಾಲ್ಕನೇ ವಿಕೆಟ್‌ಗೆ 154 ರನ್‌ಗಳ ಜೊತೆಯಾಟ ಕಟ್ಟುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ.
ರೂಟ್ ಹಾಗೂ ಬ್ರೂಕ್ ಅರ್ಧಶತಕಗಳನ್ನು ಗಳಿಸಿದ್ದು, ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ರೂಟ್ ಅಜೇಯ 72 ಹಾಗೂ ಬ್ರೂಕ್ 78 ರನ್ ಗಳಿಸಿ ಔಟಾಗದೆ ಉಳಿದಿದ್ದಾರೆ.
ಐದು ಪಂದ್ಯಗಳ ಆ್ಯಷಸ್ ಟೆಸ್ಟ್ ಸರಣಿಯನ್ನು ಆಸ್ಟ್ರೇಲಿಯಾ ಈಗಾಗಲೇ 3-1ರ ಅಂತರದಲ್ಲಿ ವಶಪಡಿಸಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.