ADVERTISEMENT

ಟೆಸ್ಟ್ ರ‍್ಯಾಂಕಿಂಗ್: ಬೌಲರ್, ಆಲ್‌ರೌಂಡರ್ ವಿಭಾಗದಲ್ಲಿ ಅಶ್ವಿನ್‌ಗೆ 2ನೇ ಸ್ಥಾನ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2021, 2:52 IST
Last Updated 30 ಡಿಸೆಂಬರ್ 2021, 2:52 IST
ಆರ್. ಅಶ್ವಿನ್
ಆರ್. ಅಶ್ವಿನ್   

ದುಬೈ: ಅನುಭವಿ ಆಫ್‌ಸ್ಪಿನ್ನರ್ ಆರ್. ಅಶ್ವಿನ್ ಬುಧವಾರ ಪ್ರಕಟವಾದ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಬೌಲರ್ ಮತ್ತು ಆಲ್‌ರೌಂಡರ್ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಉಳಿಸಿಕೊಂಡಿದ್ದಾರೆ.ತಂಡ ವಿಭಾಗದಲ್ಲಿ 124 ರೇಟಿಂಗ್ ಅಂಕಗಳನ್ನು ಹೊಂದಿರುವ ಭಾರತ ತಂಡ ಅಗ್ರಸ್ಥಾನದಲ್ಲಿದೆ.

ರವೀಂದ್ರ ಜಡೇಜಆಲ್‌ರೌಂಡರ್ ವಿಭಾಗದಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ತಂಡ ವಿಭಾಗದಲ್ಲಿ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ನಂತರದ ಎರಡು ಸ್ಥಾನಗಳಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಇವೆ.

ಬ್ಯಾಟಿಂಗ್ ವಿಭಾಗದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಕ್ರಮವಾಗಿ ಐದು ಮತ್ತು ಏಳನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ರೋಹಿತ್ 797 ಮತ್ತು ಕೊಹ್ಲಿ756 ಅಂಕಗಳನ್ನು ಪಡೆದಿದ್ದಾರೆ.

ADVERTISEMENT

ಆಸ್ಟ್ರೇಲಿಯಾದ ಮಾರ್ನಸ್ ಲಾಬುಷೇನ್ (915) ಬ್ಯಾಟರ್‌ಗಳ ವಿಭಾಗದಲ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ. ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ (900) ಮತ್ತು ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ (879) ಅವರು ಎರಡು ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅಗ್ರಸ್ಥಾನದಲ್ಲಿದ್ದಾರೆ. ಪಾಕಿಸ್ತಾನ ತಂಡದ ಎಡಗೈ ಮಧ್ಯಮವೇಗಿ ಶಾಹೀನ್ ಆಫ್ರಿದಿ ಮೂರನೇ ಸ್ಥಾನ ಪಡೆದಿದ್ದಾರೆ.

ಆ್ಯಷಸ್ ಸರಣಿಯ ಮೂರನೇ ಟೆಸ್ಟ್‌ನಲ್ಲಿ ಪದಾರ್ಪಣೆ ಮಾಡಿದ ಸ್ಕಾಟ್ ಬೊಲ್ಯಾಂಡ್ ಇದೇ ಮೊದಲ ಸಲ ರ‍್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ. ಇಂಗ್ಲೆಂಡ್ ಎದುರು ಆರು ವಿಕೆಟ್ ಗಳಿಸಿದ ಅವರು 271 ಅಂಕಗಳೊಂದಿಗೆ 74ನೇ ಸ್ಥಾನ ಪಡೆದಿದ್ದಾರೆ.

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ (382) ಅಗ್ರಸ್ಥಾನ ಗಳಿಸಿದ್ದಾರೆ.ಅಶ್ವಿನ್ (360) ಮತ್ತು ಜಡೇಜ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನಗಳಲ್ಲಿದ್ದಾರೆ.ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.