ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಜಂ ಪರಸ್ಪರಭೇಟಿಯಾಗುವ ಮೂಲಕ ಗಮನ ಸೆಳೆದಿದ್ದಾರೆ.
ದುಬೈನಲ್ಲಿ ಇಂದಿನಿಂದ ಆರಂಭವಾಗಲಿರುವ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗಾಗಿ ಎಲ್ಲ ತಂಡಗಳು ಭರ್ಜರಿ ಪೂರ್ವ ಸಿದ್ದತೆಯನ್ನೇ ನಡೆಸಿವೆ.
ಈ ನಡುವೆ ಅಭ್ಯಾಸದ ಅವಧಿಯ ವೇಳೆ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ಭೇಟಿಯಾಗುವ ಮೂಲಕ ಸ್ನೇಹ ಬಾಂಧವ್ಯ ಮೆರೆದಿದ್ದಾರೆ.
ಈ ಮೊದಲು ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರೊಂದಿಗೆ ಬಾಬರ್ ಮಾತುಕತೆ ನಡೆಸಿರುವುದು ವೈರಲ್ ಆಗಿತ್ತು.
ಈಗ ರೋಹಿತ್ ಶರ್ಮಾ ಅವರೊಂದಿಗೂ ಬಾಬರ್ ದೀರ್ಘ ಸಮಾಲೋಚನೆ ನಡೆಸಿದ್ದಾರೆ. ಈ ವಿಡಿಯೊವನ್ನು ಪಾಕಿಸ್ತಾನ ಕ್ರಿಕೆಟ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವು ಭಾನುವಾರ ದುಬೈನಲ್ಲಿ ನಡೆಯಲಿದೆ.
ಏಳು ಬಾರಿಯ ಚಾಂಪಿಯನ್ ಭಾರತ ಈ ಸಲವೂ ಪ್ರಶಸ್ತಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.