ADVERTISEMENT

Asia Cup 2023: ಭಾರತಕ್ಕೆ ಇಂದು ಲಂಕಾ ಸವಾಲು

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2023, 23:30 IST
Last Updated 11 ಸೆಪ್ಟೆಂಬರ್ 2023, 23:30 IST
<div class="paragraphs"><p>ಟೀಮ್ ಇಂಡಿಯಾ ಆಟಗಾರರು</p></div>

ಟೀಮ್ ಇಂಡಿಯಾ ಆಟಗಾರರು

   

ಕೊಲಂಬೊ: ಇಂದು (ಮಂಗಳವಾರ) ನಡೆಯಲಿರುವ ಸೂಪರ್‌ ಫೋರ್‌ ಹಂತದ ಪಂದ್ಯದಲ್ಲಿ ರೋಹಿತ್‌ ಶರ್ಮಾ ಬಳಗ, ಆತಿಥೇಯ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇದರಿಂದ ಭಾರತ ತಂಡ ಸತತ ಮೂರನೇ ದಿನ ಕಣಕ್ಕಿಳಿದಂತಾಗುತ್ತದೆ. ಪಾಕ್‌ ವಿರುದ್ಧ ಭಾನುವಾರ ನಡೆಯಬೇಕಿದ್ದ ಪಂದ್ಯ ಮಳೆಯಿಂದ ಅರ್ಧದಲ್ಲೇ ನಿಂತಿತ್ತು. ಮೀಸಲು ದಿನವಾದ ಸೋಮವಾರ ಮುಂದುವರಿಸಲಾಗಿತ್ತು.

ಶ್ರೀಲಂಕಾ ತಂಡ ಸೂಪರ್‌ ಫೋರ್‌ ಹಂತದ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿತ್ತು. ಲೀಗ್‌ ಹಂತದಲ್ಲಿ ಎರಡು ಪಂದ್ಯಗಳನ್ನು ಗೆದ್ದುಕೊಂಡಿದ್ದ ಆತಿಥೇಯ ತಂಡ ಟೂರ್ನಿಯಲ್ಲಿ ಅಜೇಯವಾಗಿ ಉಳಿದುಕೊಂಡಿದೆ.

ADVERTISEMENT

ಪಂದ್ಯ ಆರಂಭ: ಮಧ್ಯಾಹ್ನ 3, ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.