ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸಲ್ಮಾನ್ ಆಘಾ ಅವರು ಮ್ಯಾಚ್ ರೆಫರಿ ಆ್ಯಂಡಿ ಪೈಕ್ರಾಫ್ಟ್ ಅವರೊಂದಿಗೆ
ಪಿಟಿಐ ಚಿತ್ರ
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಯುಎಇ ವಿರುದ್ಧದ ಪಂದ್ಯಕ್ಕೂ ಮುನ್ನ ಶಿಷ್ಟಾಚಾರ ಉಲ್ಲಂಘಿಸಿ ‘ಹೈಡ್ರಾಮಾ’ ನಡೆಸಿದ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಚಿಂತನೆ ನಡೆಸುತ್ತಿದೆ.
ಭಾರತ ಮತ್ತು ಪಾಕಿಸ್ತಾನ ಪಂದ್ಯದಲ್ಲಿ ನಡೆದಿದ್ದ ‘ಹಸ್ತಲಾಘವ ನಿರಾಕರಣೆ’ ವಿವಾದದ ಹಿನ್ನೆಲೆಯಲ್ಲಿ ಮ್ಯಾಚ್ ರೆಫರಿ ಆ್ಯಂಡಿ ಪೈಕ್ರಾಫ್ಟ್ ಅವರನ್ನು ವಜಾಗೊಳಿಸ ಬೇಕು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಐಸಿಸಿಗೆ ಮನವಿ ಮಾಡಿತ್ತು. ಆದರೆ ಆ ಮನವಿಯನ್ನು ಐಸಿಸಿ ತಳ್ಳಿ ಹಾಕಿತ್ತು. ಅದನ್ನು ವಿರೋಧಿಸಿ ತಂಡವನ್ನು ತಡವಾಗಿ ಕ್ರೀಡಾಂಗಣಕ್ಕೆ ಕಳುಹಿಸಿತ್ತು.
ಪಂದ್ಯಕ್ಕೂ ಮುನ್ನ ಐಸಿಸಿಯು ಪಿಸಿಬಿಗೆ ಇ–ಮೇಲ್ ಕಳುಹಿಸಿದೆ. ಅದರಲ್ಲಿ ಬಹು ತಂಡಗಳ ಟೂರ್ನಿಯಲ್ಲಿ ಪಾಕ್ ತಂಡದ ದುರ್ನಡತೆ ಮತ್ತು ಬಹು ಶಿಷ್ಟಾಚಾರ ಉಲ್ಲಂಘಿಸಿರುವ ಬಗ್ಗೆ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.