ADVERTISEMENT

Asia Cup: ಸುಲಭ ಜಯ ಸಾಧಿಸಿದ ಭಾರತ; ಪಾಕಿಸ್ತಾನಕ್ಕೆ ಮುಖಭಂಗ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಸೆಪ್ಟೆಂಬರ್ 2025, 17:56 IST
Last Updated 14 ಸೆಪ್ಟೆಂಬರ್ 2025, 17:56 IST
<div class="paragraphs"><p>ಟೀಮ್ ಇಂಡಿಯಾ ಆಟಗಾರರು</p></div>

ಟೀಮ್ ಇಂಡಿಯಾ ಆಟಗಾರರು

   

–ಪಿಟಿಐ ಚಿತ್ರ

ದುಬೈ: ಏಷ್ಯಾಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ತೋರಿದ ಭಾರತ, 7 ವಿಕೆಟ್‌ ಅಂತರದ ಸುಲಭ ಜಯ ಸಾಧಿಸಿತು.

ADVERTISEMENT

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕ್‌ ಪಡೆ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 127 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಗುರಿ ಭಾರತಕ್ಕೆ ಸವಾಲೇ ಆಗಲಿಲ್ಲ. ಆರಂಭಿಕ ಬ್ಯಾಟರ್ ಅಭಿಷೇಕ್‌ ಶರ್ಮಾ (13 ಎಸೆತ, 31 ರನ್‌) ಬೀಸಾಟ, ನಾಯಕ ಸೂರ್ಯಕುಮಾರ್‌ ಯಾದವ್‌ (ಅಜೇಯ 47 ರನ್‌) ಹಾಗೂ ತಿಲಕ್‌ ವರ್ಮಾ ಅವರ (31 ರನ್‌) ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ಟೀಂ ಇಂಡಿಯಾ 15.5 ಓವರ್‌ಗಳಲ್ಲೇ 131 ರನ್‌ ಗಳಿಸಿ ಜಯದ ನಗೆ ಬೀರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.