ಭಾರತ vs ಪಾಕಿಸ್ತಾನ
(ಚಿತ್ರ ಕೃಪೆ: X/ACCMedia1)
ದುಬೈ: ಏಷ್ಯಾ ಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಸೂಪರ್ 4 ಪಂದ್ಯ ಇದೇ ಭಾನುವಾರದಂದು ನಡೆಯಲಿದೆ. ಈ ಪಂದ್ಯದ ಮ್ಯಾಚ್ ರೆಫ್ರಿಯಾಗಿ ಆ್ಯಂಡಿ ಪೈಕ್ರಾಫ್ಟ್ ಅವರನ್ನು ನೇಮಕಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೊದಲ ಪಂದ್ಯದಲ್ಲಿ ಭಾರತ ತಂಡದ ಆಟಗಾರರು ಪಾಕಿಸ್ತಾನದ ಆಟಗಾರರ ಜೊತೆ ಹಸ್ತಲಾಘವ ಮಾಡದಿರುವ ಘಟನೆಗೆ ಸಂಬಂಧಿಸಿದಂತೆ ಪಂದ್ಯದ ಮ್ಯಾಚ್ ರೆಫ್ರಿಯಾಗಿದ್ದ ಪೈಕ್ರಾಫ್ಟ್ ಅವರೇ ಕಾರಣ. ಹಾಗಾಗಿ ಅವರನ್ನು ತಾನು ಆಡುವ ಎಲ್ಲಾ ಪಂದ್ಯಗಳಿಂದ ವಜಾ ಮಾಡುವಂತೆ ಪಿಸಿಬಿ ಐಸಿಸಿಗೆ ಮನವಿ ಮಾಡಿತ್ತು. ಆದರೆ, ಪಿಸಿಬಿಯ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು.
ಪಿಸಿಬಿ ಪದೇ ಪದೇ ವಿನಂತಿಸಿದರ ಹೊರತಾಗಿಯೂ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಭಾನುವಾರ ನಡೆಯಲಿರುವ ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಮ್ಯಾಚ್ ರೆಫ್ರಿಯಾಗಿ ಆಂಡಿ ಪೈಕ್ರಾಫ್ಟ್ ಇರಲಿದ್ದಾರೆ ಎಂದು ಟೂರ್ನಮೆಂಟ್‌ನ ಮೂಲವೊಂದು ಪಿಟಿಐಗೆ ತಿಳಿಸಿದೆ. ಆದರೆ, ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.