ADVERTISEMENT

Asia Cup| ಪಾಕ್ ವಿರುದ್ಧ ಸ್ಫೋಟಕ ಅರ್ಧಶತಕ: ಗುರುವಿನ ದಾಖಲೆ ಮುರಿದ ಅಭಿಷೇಕ್

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 6:13 IST
Last Updated 22 ಸೆಪ್ಟೆಂಬರ್ 2025, 6:13 IST
<div class="paragraphs"><p>ಅಭಿಷೇಕ್ ಶರ್ಮಾ</p></div>

ಅಭಿಷೇಕ್ ಶರ್ಮಾ

   

(ಪಿಟಿಐ ಚಿತ್ರ)

ದುಬೈ: ಪಾಕಿಸ್ತಾನ ವಿರುದ್ಧ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ತಂಡ ಇನ್ನೂ 7 ಎಸೆತಗಳು ಬಾಕಿ ಇರುವಂತೆ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅಬ್ಬರದ ಅರ್ಧಶತಕ ಸಿಡಿಸುವ ಮೂಲಕ ಯುವರಾಜ್ ಸಿಂಗ್ ಅವರ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಮುರಿದಿದ್ದಾರೆ.

ADVERTISEMENT

ಟೀಂ ಇಂಡಿಯಾ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್‌ಗಳಿಸಿತು. 172 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತದ ಪರವಾಗಿ ಅಬ್ಬರದ ಬ್ಯಾಟಿಂಗ್ ನಡೆಸಿದ ಅಭಿಷೇಕ್ ಶರ್ಮಾ ಕೇವಲ 39 ಎಸೆತಗಳಲ್ಲಿ 74 ರನ್ ಸಿಡಿಸಿ ಮಿಂಚಿದರು. ಇದರಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್ ಸೇರಿದ್ದವು.

ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದ ಅಭಿಷೇಕ್ ಶರ್ಮಾ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದರು. ಆ ಮೂಲಕ ಪಾಕಿಸ್ತಾನದ ವಿರುದ್ಧ ಟಿ–20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆದರು. ಇದಕ್ಕೂ ಮೊದಲು ಈ ದಾಖಲೆ ಮಾಜಿ ಆಟಗಾರ ಯುವರಾಜ್ ಸಿಂಗ್ ಹೆಸರಿನಲ್ಲಿತ್ತು.

ಯುವರಾಜ್ ಸಿಂಗ್ ಪಾಕಿಸ್ತಾನದ ವಿರುದ್ಧ 2012 ರಲ್ಲಿ ಅಹಮದಾಬಾದ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ 29 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದು ಪಾಕ್ ವಿರುದ್ಧ ಇದುವರೆಗೂ ದಾಖಲಾಗಿದ್ದ ಅತೀ ವೇಗದ ಅರ್ಧಶತಕವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.