ದುಬೈ: ಏಷ್ಯಾ ಕಪ್‌ನಲ್ಲಿ ಭಾರತ ತಂಡವನ್ನು ಯಾವ ತಂಡ ಬೇಕಾದರೂ ಸೋಲಿಸಬಹುದು ಎಂದು ಬಾಂಗ್ಲಾದೇಶ ಕ್ರಿಕೆಟ್ ತಂಡದ ಮುಖ್ಯ ಕೋಚ್ ಫಿಲ್ ಸಿಮನ್ಸ್ ಹೇಳಿದ್ದಾರೆ.
ಈ ಬಾರಿಯ ಏಷ್ಯಾ ಕಪ್‌ನಲ್ಲಿ ಅಜೇಯವಾಗಿರುವ ಭಾರತ ತಂಡವನ್ನು ಬುಧವಾರ ಸೂಪರ್–4 ಪಂದ್ಯದಲ್ಲಿ ಬಾಂಗ್ಲಾದೇಶ ಎದುರಿಸಲಿದೆ.
ಕಳೆದ ನಾಲ್ಕು ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಪಡೆಯು ಆಡಿರುವ ಆಟವು, ಬಾಂಗ್ಲಾ ಮೇಲಿನ ಪಂದ್ಯದಲ್ಲಿ ಪರಿಣಾಮ ಬೀರುವುದಿಲ್ಲ. ಟಿ–20 ಕ್ರಿಕೆಟ್‌ನಲ್ಲಿ ಮೂರುವರೆ ಗಂಟೆಗಳ ಆಟ ಮಾತ್ರ ಪಂದ್ಯದ ಫಲಿತಾಂಶವನ್ನು ನಿರ್ಧರಿಸುತ್ತದೆ. ಎಲ್ಲಾ ತಂಡಗಳಿಗೂ ಭಾರತವನ್ನು ಸೋಲಿಸುವ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ.
ದುಬೈ ಕ್ರೀಡಾಂಗಣವು ಬ್ಯಾಟರ್‌ಗಳಿಗೆ ನೆರವು ನೀಡುತ್ತಿದೆ. ಇಲ್ಲಿ ಟಾಸ್ ಪ್ರಮುಖ ಪಾತ್ರವಹಿಸುವುದಿಲ್ಲ. ನಾವು ಕೇವಲ ಶ್ರೀಲಂಕಾ ವಿರುದ್ಧ ಗೆಲ್ಲಲು ಮಾತ್ರ ಬಂದಿಲ್ಲ, ಪ್ರಶಸ್ತಿ ಗೆಲ್ಲಲು ಬಂದಿದ್ದೇವೆ ಎಂದು ಫಿಲ್ ಸಿಮನ್ಸ್ ತಿಳಿಸಿದ್ದಾರೆ.
ಕಳೆದ ಪಂದ್ಯದಲ್ಲಿ ಬಾಂಗ್ಲಾದೇಶವು ಶ್ರೀಲಂಕಾ ವಿರುದ್ಧ 4 ವಿಕೆಟ್‌ಗಳ ಜಯಗಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.