ನವದೆಹಲಿ: ಈ ಬಾರಿಯ ಏಷ್ಯಾ ಕಪ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತ ಕ್ರಿಕೆಟ್ ತಂಡಕ್ಕೆ ‘ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ’(ಬಿಸಿಸಿಐ) ₹21 ಕೋಟಿ ಬಹುಮಾನ ಘೋಷಣೆ ಮಾಡಿದೆ.
ಭಾನುವಾರ ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಐದು ವಿಕೆಟ್‌ಗಳ ಜಯ ಸಾಧಿಸಿತ್ತು.
‘ಇದೊಂದು ಅಸಾಧಾರಣ ಗೆಲುವಾಗಿದೆ... ಇದರ ಸಂಭ್ರಮಾಚರಣೆಯ ಭಾಗವಾಗಿ ಭಾರತ ತಂಡದ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗೆ ₹21 ಕೋಟಿ ನಗದು ಬಹುಮಾನ ಘೋಷಿಸಲಾಗಿದೆ’ ಎಂದು ಬಿಸಿಸಿಐ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದೆ.
‘ಮೂರು ಹೊಡೆತಗಳು, ಶೂನ್ಯ ಪ್ರತಿಕ್ರಿಯೆ. ಏಷ್ಯಾ ಕಪ್ ಚಾಂಪಿಯನ್ಸ್. ಸಂದೇಶ ತಲುಪಿಸಲಾಗಿದೆ’ ಎಂದು ಪರೋಕ್ಷವಾಗಿ ಕುಟುಕಿದೆ.
‘ಪಾಕ್ ವಿರುದ್ಧ 3-0 ಅಂತರದಲ್ಲಿ ಪ್ರಾಬಲ್ಯ ಸಾಧಿಸಿದ ಟೀಮ್ ಇಂಡಿಯಾಗೆ ಅಭಿನಂದನೆಗಳು. ಒತ್ತಡದ ನಡುವೆಯೂ ತಿಲಕ್ ವರ್ಮಾ ಮತ್ತು ಕುಲದೀಪ್ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ’ ಎಂದು ಮಂಡಳಿಯ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.