ADVERTISEMENT

ಕೋವಿಡ್‌: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ರದ್ದು

ಏಜೆನ್ಸೀಸ್
Published 19 ಮೇ 2021, 15:18 IST
Last Updated 19 ಮೇ 2021, 15:18 IST
ಕ್ರಿಕೆಟ್‌
ಕ್ರಿಕೆಟ್‌   

ಕೊಲಂಬೊ: ಶ್ರೀಲಂಕಾದಲ್ಲಿ ಮುಂದಿನ ತಿಂಗಳು ನಡೆಯಬೇಕಾಗಿದ್ದ ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಯನ್ನು ರದ್ದು ಮಾಡಲಾಗಿದೆ. ಏಷ್ಯಾ ವಲಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ವರ್ಷ ಪಾಕಿಸ್ತಾನದಲ್ಲಿ ನಡೆಯಬೇಕಾಗಿದ್ದ ಟೂರ್ನಿಯನ್ನು ಮುಂದೂಡಲಾಗಿತ್ತು.

‘ಸದ್ಯದ ಪರಿಸ್ಥಿತಿಯಲ್ಲಿ ಟೂರ್ನಿಯನ್ನು ಜೂನ್ ತಿಂಗಳಲ್ಲಿ ಆಯೋಜಿಸುವುದು ಕಷ್ಟಸಾಧ್ಯ. ಇನ್ನು 2023ರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿ ವರೆಗೂ ಏಷ್ಯಾಕಪ್ ಆಯೋಜಿಸಲು ಸಾಧ್ಯವಿಲ್ಲ. ಯಾಕೆಂದರೆ ಬಹುತೇಕ ತಂಡಗಳು ಮುಂದಿನ ಎರಡು ವರ್ಷಗಳ ವೇಳಾಪಟ್ಟಿಗೆ ಈಗಾಗಲೇ ಬದ್ಧವಾಗಿವೆ. ಟೂರ್ನಿ ಮುಂದೂಡಿಕೆ ಬಗ್ಗೆ ಏಷ್ಯಾ ಕ್ರಿಕೆಟ್ ಸಮಿತಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಿದೆ’ ಎಂದು ಶ್ರೀಲಂಕಾ ಕ್ರಿಕೆಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆ್ಯಶ್ಲಿ ಡಿ ಸಿಲ್ವಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT