ಟೀಂ ಇಂಡಿಯಾ
ದುಬೈ: ಏಷ್ಯಾ ಕಪ್ ಟೂರ್ನಿಯ ಸೂಪರ್ ಫೋರ್ ಹಂತದ ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ತಂಡವು ಬೌಲಿಂಗ್ ಆಯ್ದುಕೊಂಡಿದೆ.
ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ.
ಉಭಯ ತಂಡಗಳ ಈವರೆಗಿನ ಮುಖಾಮುಖಿಯಲ್ಲಿ ಭಾರತ 16–1 ಗೆಲುವಿನ ದಾಖಲೆ ಹೊಂದಿದೆ. ಕೊನೆಯ ಬಾರಿ ಹೈದರಾಬಾದಿನಲ್ಲಿ ಇವೆರಡು ತಂಡಗಳು ಮುಖಾಮುಖಿಯಾದಾಗ ಸೂರ್ಯಕುಮಾರ್ ಯಾದವ್ ಸಾರಥ್ಯದ ಪಡೆ ಆಕ್ರಮಣಕಾರಿಯಾಗಿ ಆಡಿ 6 ವಿಕೆಟ್‌ಗೆ 297 ರನ್ ಕಲೆಹಾಕಿತ್ತು. ಇದು ಚುಟುಕು ಕ್ರಿಕೆಟ್‌ನಲ್ಲಿ ಭಾರತದ ಅತ್ಯಧಿಕ ಮೊತ್ತ. ಸಂಜು ಸ್ಯಾಮ್ಸನ್ ಆ ಇನಿಂಗ್ಸ್‌ನಲ್ಲಿ ಬಿರುಸಿನ 111 ರನ್ ಹೊಡೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.