ಚಂಡೀಗಢ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಪಾಕಿಸ್ತಾನ ವಿರುದ್ಧ ನಡೆಯಲಿರುವ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಭಾರತೀಯ ಆಟಗಾರರು ಪ್ರದರ್ಶನದತ್ತ ಗಮನಹರಿಸಬೇಕು, ಬಾಹ್ಯ ಅಂಶಗಳಿಂದ ವಿಚಲಿತರಾಗಬಾರದು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ ನಂತರ ಭಾರತವು ಆಪರೇಷನ್ ಸಿಂಧೂರ ಪ್ರಾರಂಭಿಸಿದ ನಂತರ ಭಾರತ ಮತ್ತು ಪಾಕಿಸ್ತಾನಗಳು ಮೊದಲ ಬಾರಿಗೆ ದುಬೈನಲ್ಲಿ ಮುಖಾಮುಖಿಯಾಗಲಿವೆ.
‘ಭಾರತೀಯ ಆಟಗಾರರು ಆಟದ ಮೇಲೆ ಮಾತ್ರ ಗಮನಹರಿಸಬೇಕು. ಅವರ ಬಳಿ ಉತ್ತಮ ತಂಡವಿದೆ, ಅವರು ಗೆಲ್ಲಬೇಕು’ ಎಂದು ಕಪಿಲ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
‘ಸರ್ಕಾರ ತನ್ನ ಕೆಲಸವನ್ನು ಮಾಡುತ್ತದೆ, ಆಟಗಾರರು ತಮ್ಮ ಕೆಲಸವನ್ನು ಮಾಡಬೇಕು’ ಎಂದು ಅವರು ಕಿವಿಮಾತು ಹೇಳಿದ್ದಾರೆ.
ಇದು ಒಳ್ಳೆಯ ತಂಡ. ಅವರು ನಿನ್ನೆ ಚೆನ್ನಾಗಿ ಆಡಿ ಗೆದ್ದರು. ಅವರು ಟ್ರೋಫಿಯನ್ನೂ ಗೆಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.