ಜಸ್‌ಪ್ರೀತ್ ಬೂಮ್ರಾ
(ಚಿತ್ರ ಕೃಪೆ: X/@BCCI)
ದುಬೈ: ಭಾರತ ತಂಡಕ್ಕೆ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ‘ಎ’ ಗುಂಪಿನ ಕೊನೆಯ ಪಂದ್ಯ ಮಹತ್ವದ್ದೇನೂ ಅಲ್ಲ. ಆದರೆ ಶುಕ್ರವಾರ ನಡೆಯಲಿರುವ ಈ ಪಂದ್ಯಕ್ಕೆ ಭಾರತ ಒಂದು ಬದಲಾವಣೆ ಮಾಡುವ ಸಾಧ್ಯತೆಯಿದೆ. ಅಗ್ರ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರಿಗೆ ವಿಶ್ರಾಂತಿ ನೀಡುವ ನಿರೀಕ್ಷೆಯಿದೆ.
ಸೂಪರ್ ಫೋರ್ ಹಂತದಲ್ಲಿ ಭಾರತ ಸೆ. 21, 24 ಮತ್ತು 26ರಂದು ಆಡಲಿದೆ. ಸೆ. 28ರಂದು ಫೈನಲ್ ತಲುಪುವ ಸಾಧ್ಯತೆಯೂ ನಿಚ್ಚಳವಾಗಿದೆ. ಏಳು ದಿನಗಳಲ್ಲಿ ನಾಲ್ಕು ಪಂದ್ಯಗಳನ್ನು ಆಡಬೇಕಿದೆ. ಹೀಗಾಗಿ ಚಿಂತಕರ ಚಾವಡಿಯು ಪ್ರಮುಖ ವೇಗದ ಬೌಲರ್ ಬೂಮ್ರಾ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಾಗಿದೆ. ಅವರಿಗೆ ವಿಶ್ರಾಂತಿ ನೀಡಿದರೆ, ಅರ್ಷದೀಪ್ ಸಿಂಗ್ ಅಥವಾ ಹರ್ಷಿತ್ ರಾಣಾ ಅವರಲ್ಲಿ ಒಬ್ಬರಿಗೆ ಅವಕಾಶವಾಗಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.