ADVERTISEMENT

ಭಾರತಾಂಬೆಗೆ ಸಲಾಂ ಹೊಡೆದ ಆಸ್ಟ್ರೇಲಿಯಾ ಕ್ರಿಕೆಟ್‌ ಅಭಿಮಾನಿ: ವಿಡಿಯೊ ವೈರಲ್‌

ಏಜೆನ್ಸೀಸ್
Published 20 ಜನವರಿ 2021, 13:53 IST
Last Updated 20 ಜನವರಿ 2021, 13:53 IST
ಘೋಷಣೆ ಕೂಗುತ್ತಿರುವ ಆಸ್ಟ್ರೇಲಿಯಾ ಕ್ರಿಕೆಟ್‌ ಅಭಿಮಾನಿ
ಘೋಷಣೆ ಕೂಗುತ್ತಿರುವ ಆಸ್ಟ್ರೇಲಿಯಾ ಕ್ರಿಕೆಟ್‌ ಅಭಿಮಾನಿ   

ಬೆಂಗಳೂರು: ಜನಾಂಗೀಯ ನಿಂದನೆ ಆರೋಪದ ನಡುವೆಯೂ ಆಸ್ಟ್ರೇಲಿಯಾ ಕ್ರಿಕೆಟ್‌ ಅಭಿಮಾನಿಯೊಬ್ಬರು ಭಾರತಾಂಬೆಗೆ ಗೌರವ ಸಲ್ಲಿಸಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಹೌದು, ಭಾರತ– ಆಸ್ಟ್ರೇಲಿಯಾ ಟೆಸ್ಟ್‌ ಸರಣಿ ಆಟಕ್ಕಿಂತಲ್ಲೂ ಹೆಚ್ಚು ಜನಾಂಗೀಯ ನಿಂದನೆಗೇ ಹೆಚ್ಚು ಚರ್ಚೆಯಾಗಿತ್ತು. ಇದೀಗ ಆಸ್ಟ್ರೇಲಿಯಾ ಕ್ರಿಕೆಟ್‌ ಅಭಿಮಾನಿಯೊಬ್ಬ ‘ವಂದೇ ಮಾತರಂ, ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗುವ ಮೂಲಕ ಭಾರತೀಯರ ಮನಗೆದ್ದಿದ್ದಾನೆ.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್‌ ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರರಾದ ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಅವರಿಗೆ ಕುಡಿದ ಮತ್ತಿನಲ್ಲಿದ್ದ ಪ್ರೇಕ್ಷಕನೊಬ್ಬ ಜನಾಂಗೀಯ ನಿಂದನೆ ಮಾಡಿದ್ದನು.

ADVERTISEMENT

ಘಟನೆಕುರಿತು ಬಿಸಿಸಿಐ, ನಾಯಕ ವಿರಾಟ್‌ ಕೊಹ್ಲಿ ಸೇರಿದಂತೆ ಹಲವು ಹಿರಿಯ ಆಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕ್ರಿಕೆಟ್‌ ಆಸ್ಟ್ರೇಲಿಯಾ(ಸಿಎ) ಕೂಡ ಭಾರತ ತಂಡಕ್ಕೆ ಕ್ಷಮೆಯಾಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.