ADVERTISEMENT

ಭಾರತದ ವಿರುದ್ಧ ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ

ಬಾರ್ಡರ್–ಗಾವಸ್ಕರ್ ಟ್ರೋಫಿ ಟೆಸ್ಟ್‌ ಕ್ರಿಕೆಟ್

ಏಜೆನ್ಸೀಸ್
Published 14 ಡಿಸೆಂಬರ್ 2018, 2:39 IST
Last Updated 14 ಡಿಸೆಂಬರ್ 2018, 2:39 IST
   

ಪರ್ತ್‌:ಭಾರತ–ಆಸ್ಟ್ರೇಲಿಯಾ ನಡುವಣ ಬಾರ್ಡರ್–ಗಾವಸ್ಕರ್ ಟ್ರೋಫಿ ಟೆಸ್ಟ್‌ ಕ್ರಿಕೆಟ್ ಟೂರ್ನಿಯ ಎರಡನೇ ಪಂದ್ಯ ಇಲ್ಲಿನಆಪ್ಟಸ್ ಕ್ರೀಡಾಂಗಣದಲ್ಲಿಶುಕ್ರವಾರ ಆರಂಭಗೊಂಡಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.

ಆಸ್ಟ್ರೇಲಿಯಾ ತಂಡವು ಮೊದಲ ಪಂದ್ಯದಲ್ಲಿ ಆಡಿದ್ದ ಆಟಗಾರರನ್ನೇ ಕಣಕ್ಕಿಳಿಸಿದ್ದರೆ ಭಾರತ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಗಾಯಾಳುಗಳಾಗಿರುವಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಮತ್ತು ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಬದಲಿಗೆ ಹನುಮ ವಿಹಾರಿ ಮತ್ತು ಉಮೇಶ್ ಯಾದವ್‌ಗೆ ಆಡುವ ತಂಡದಲ್ಲಿ ಸ್ಥಾನ ದೊರೆತಿದೆ.

ಸರಣಿಯ ಮೊದಲ ಪಂದ್ಯದಲ್ಲಿ 31 ರನ್‌ಗಳ ಜಯ ಸಾಧಿಸಿದ್ದ ಭಾರತ ಗೆಲುವಿನ ಹುಮ್ಮಸ್ಸಿನೊಂದಿಗೆಎರಡನೇ ಪಂದ್ಯ ಆರಂಭಿಸಿದೆ. ಮೊದಲ ಪಂದ್ಯದಲ್ಲಿಒಟ್ಟು ಆರು ವಿಕೆಟ್ ಉರುಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಅಶ್ವಿನ್‌ ಅವರ ಕೊರತೆ ತಂಡಕ್ಕೆ ಕಾಡುವ ಸಾಧ್ಯತೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.