ಗ್ಲೆನ್ ಮ್ಯಾಕ್ಸ್‌ವೆಲ್
ಪಿಟಿಐ ಚಿತ್ರ
ಮೆಲ್ಬರ್ನ್: ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಪಾದದ ನೋವಿಗೆ ವಿಶ್ರಾಂತಿ ಪಡೆಯಲು ಈ ತಿಂಗಳ ಭಾರತ ಪ್ರವಾಸ ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ವಿಶ್ವಕಪ್ ಹತ್ತಿರದಲ್ಲಿರುವುದರಿಂದ ಮುಂಜಾಗ್ರತೆಯಾಗಿ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ.
ಎಡಪಾದದ ನೋವಿನಿಂದಾಗಿ 34 ವರ್ಷದ ಈ ಆಟಗಾರ ದಕ್ಷಿಣ ಆಫ್ರಿಕಾ ವಿರುದ್ಧ ಟಿ–20 ಸರಣಿಯಲ್ಲೂ ಆಡಿರಲಿಲ್ಲ. ಕಳೆದ ವರ್ಷವೂ ಇದೇ ಕಾಲಿಗೆ ನೋವು ಕಾಡಿತ್ತು.
ವಿಶ್ವಕಪ್‌ಗೆ ತಾಲೀಮು ಆಗಿ ಆಸ್ಟ್ರೇಲಿಯಾವು ಭಾರತ ವಿರುದ್ಧ ಮೂರು ಏಕದಿನ ಪಂದ್ಯಗಳನ್ನು ಆಡಲಿದ್ದು, ಮೊದಲ ಪಂದ್ಯ ಮೊಹಾಲಿಯಲ್ಲಿ ಸೆಪ್ಟೆಂಬರ್ 22ರಂದು ನಿಗದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.