ADVERTISEMENT

ಐಪಿಎಲ್ ಪ್ರಾಯೋಜಕತ್ವ: ಬಿಡ್ಡಿಂಗ್‌ಗೆ ಪತಂಜಲಿ ಚಿಂತನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಆಗಸ್ಟ್ 2020, 6:03 IST
Last Updated 10 ಆಗಸ್ಟ್ 2020, 6:03 IST
ಬಾಬಾ ರಾಮ್‌ದೇವ್
ಬಾಬಾ ರಾಮ್‌ದೇವ್   

ನವದೆಹಲಿ: ಐಪಿಎಲ್ 2020ನೇ ಆವೃತ್ತಿಯ ಪ್ರಾಯೋಜಕತ್ವಕ್ಕೆ ಯೋಗ ಗುರು ಬಾಬಾ ರಾಮ್‌ದೇವ್ ಅವರ ‍‘ಪತಂಜಲಿ ಆಯುರ್ವೇದ’ ಬಿಡ್ಡಿಂಗ್‌ ಮಾಡಲು ಚಿಂತನೆ ನಡೆಸಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಚೀನಾದ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿ ವಿವೊ ಅನ್ನು ಐಪಿಎಲ್ ಪ್ರಾಯೋಜಕತ್ವದಿಂದಬಿಸಿಸಿಐಇತ್ತೀಚೆಗೆ ಅಮಾನತುಗೊಳಿಸಿತ್ತು.

ಪತಂಜಲಿ ಬ್ರಾಂಡ್‌ಗೆ ಜಾಗತಿಕ ಮಾರುಕಟ್ಟೆ ಕಲ್ಪಿಸುವ ಸಲುವಾಗಿ ಈ ವರ್ಷದ ಐಪಿಎಲ್ ಪ್ರಾಯೋಜಕತ್ವ ವಹಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಕಂಪನಿಯ ವಕ್ತಾರ ಎಸ್.ಕೆ.ತಿಜಾರಾವಾಲ ಹೇಳಿದ್ದಾರೆ. ಜಿಯೊ, ಅಮೆಜಾನ್, ಟಾಟಾ ಗ್ರೂಪ್ ಮತ್ತು ಅದಾನಿ ಗ್ರೂಪ್‌ಗಳೂ ಪ್ರಾಯೋಜಕತ್ವ ವಹಿಸಿಕೊಳ್ಳಲು ಉತ್ಸುಕವಾಗಿವೆ ಎಂದು ವರದಿ ಉಲ್ಲೇಖಿಸಿದೆ.

ADVERTISEMENT

ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಭಾರತ–ಚೀನಾ ಸೇನಾ ಪಡೆಗಳ ನಡುವೆ ಸಂಘರ್ಷ ನಡೆದ ಬಳಿಕ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಬೇಕೆಂಬ ಕರೆ ದೇಶದಲ್ಲಿ ತೀವ್ರಗೊಂಡಿತ್ತು. ಇದರ ಬೆನ್ನಲ್ಲೇ ಐಪಿಎಲ್ ಪ್ರಾಯೋಜಕತ್ವದಿಂದ ವಿವೊ ಅನ್ನು ಅಮಾನತುಗೊಳಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.