ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಟಿ20 ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಅತಿ ಹೆಚ್ಚು ಅವಧಿಯವರೆಗೆ ಅಗ್ರಸ್ಥಾನ ಕಾಪಾಡಿಕೊಂಡ ದಾಖಲೆಯನ್ನು ಪಾಕಿಸ್ತಾನದ ಬಾಬರ್ ಆಜಂ ಮಾಡಿದ್ಧಾರೆ. ಇದರೊಂದಿಗೆ ಭಾರತದ ವಿರಾಟ್ ಕೊಹ್ಲಿ ದಾಖಲೆಯನ್ನು ಅವರು ಮೀರಿ ನಿಂತಿದ್ದಾರೆ.
ಕೊಹ್ಲಿ 1013 ದಿನಗಳವರೆಗೆ ಅಗ್ರಸ್ಥಾನ ಕಾಪಾಡಿಕೊಂಡಿದ್ದರು. ಇದೀಗ ಆಜಂ ಈ ದಾಖಲೆಯನ್ನು ಮುರಿದು ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
ಬುಧವಾರ ಪ್ರಕಟವಾದ ಪಟ್ಟಿಯಲ್ಲಿ ಭಾರತದ ಇಶಾನ್ ಕಿಶಕ್ನ ಟಿ20 ರ‍್ಯಾಂಕಿಂಗ್‌ನಲ್ಲಿ ಎರಡು ಸ್ಥಾನಗಳ ಬಡ್ತಿ ಪಡೆದಿದ್ದಾರೆ. ಏಳನೇ ಸ್ಥಾನ ಪಡೆದಿದ್ದಾರೆ. ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಕ್ರಮವಾಗಿ 104ನೇ ಹಾಗೂ 144ನೇ ಸ್ಥಾನ ಗಳಿಸಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಹರ್ಷಲ್ ಪಟೇಲ್ 37 ರಿಂದ 33ನೇ ಸ್ಥಾನಕ್ಕೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.