ADVERTISEMENT

ಚೆಕ್ ಬೌನ್ಸ್ ಪ್ರಕರಣ: ಬಾಂಗ್ಲಾ ಕ್ರಿಕೆಟಿಗ ಶಕೀಬ್ ವಿರುದ್ಧ ಬಂಧನ ವಾರಂಟ್ ಜಾರಿ

ಪಿಟಿಐ
Published 19 ಜನವರಿ 2025, 11:10 IST
Last Updated 19 ಜನವರಿ 2025, 11:10 IST
ಶಕೀಬ್ ಅಲ್ ಹಸನ್
ಶಕೀಬ್ ಅಲ್ ಹಸನ್    

ಢಾಕಾ: ಬಾಂಗ್ಲಾದೇಶ ಕ್ರಿಕೆಟ್ ತಂಡದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಅವರನ್ನು ಬಂಧಿಸಲು ಢಾಕಾ ನ್ಯಾಯಾಲಯವು ವಾರಂಟ್ ಜಾರಿ ಮಾಡಿದೆ. 

ಅವಾಮಿ ಲೀಗ್ ಪಕ್ಷದ ಮಾಜಿ ಸಂಸದ ಕೂಡ ಆಗಿರುವ ಶಕೀಬ್ ಅವರ ಮೇಲೆ ಎರಡು ಚೆಕ್‌ ಬೌನ್ಸ್‌ ಪ್ರಕರಣಗಳು ದಾಖಲಾಗಿವೆ. 

ಬಾಂಗ್ಲಾದಲ್ಲಿ ಈ ಹಿಂದೆ ಪ್ರಧಾನಿಯಾಗಿದ್ದ ಶೇಖ್ ಹಸೀನಾ ಅವರ ಪದಚ್ಯುತಿಯ ನಂತರ ಶಕೀಬ್ ಕೂಡ ದೇಶ ಬಿಟ್ಟಿದ್ದಾರೆ. ಹಲವು ತಿಂಗಳುಗಳಿಂದ ಅವರು ಬಾಂಗ್ಲಾಕ್ಕೆ ಮರಳಿಲ್ಲ. 

ADVERTISEMENT

ಶಕೀಬ್ ಅವರ ಮೇಲೆ ಅಂತರರಾಷ್ಟ್ರೀಯ ಫೈನಾನ್ಸ್‌ ಇನ್ವೆಸ್ಟ್‌ಮೆಂಟ್ ಮತ್ತು ಕಾಮರ್ಸ್ (ಐಎಫ್‌ಐಸಿ) ಬ್ಯಾಂಕ್‌ ಪ್ರಕರಣಗಳನ್ನು ದಾಖಲಿಸಿದೆ. ಹೋದ ವರ್ಷದ ಅಕ್ಟೋಬರ್‌ನಲ್ಲಿ ಶಕೀಬ್ ಅವರ ಹೆಸರಿನಲ್ಲಿರುವ ಕೃಷಿ ಉದ್ಯಮವೊಂದರ ಚೆಕ್‌ಗಳು ಬೌನ್ಸ್‌ ಆಗಿದ್ದವು. ಅದರ ಮೇಲೆ ಪ್ರಕರಣ ದಾಖಲಾಗಿದೆ.

ಭಾರತದಲ್ಲಿ ಹೋದ ವರ್ಷ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಬಾಂಗ್ಲಾ ತಂಡವನ್ನು ಶಕೀಬ್ ಪ್ರತಿನಿಧಿಸಿದ್ದರು. ಕಾನ್ಪುರದಲ್ಲಿ ನಡೆದಿದ್ದ ಟೆಸ್ಟ್‌ ಅವರು ಆಡಿದ್ದ ಕೊನೆಯ ಪಂದ್ಯ. ಮುಂದಿನ ತಿಂಗಳು ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಅವರು ಆಡುವ ಸಾಧ್ಯತೆ ಇದೆ. ಬಾಂಗ್ಲಾ ತಂಡದಲ್ಲಿ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.