ಕ್ರಿಕೆಟ್
(ಸಾಂಕೇತಿಕ ಚಿತ್ರ)
ಢಾಕಾ: ಬಾಂಗ್ಲಾದೇಶ ಟೆಸ್ಟ್ ತಂಡದ ಮೊದಲ ನಾಯಕರಾಗಿದ್ದ ಅಮಿನುಲ್ ಇಸ್ಲಾಂ ಅವರು ಸೋಮವಾರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ನಾಲ್ಕು ವರ್ಷಗಳ ಅವಧಿಗೆ ಅವಿರೊಧವಾಗಿ ಆಯ್ಕೆಯಾದರು. ಈ ಮೊದಲು ಅವರು ಹಂಗಾಮಿ ಅಧ್ಯಕ್ಷರಾಗಿದ್ದರು.
‘ಬುಲ್‌ಬುಲ್’ ಎಂದೇ ಹೆಸರುಪಡೆದಿರುವ 57 ವರ್ಷ ವಯಸ್ಸಿನ ಅಮಿನುಲ್ ಇಸ್ಲಾಂ ಅವರು 1999ರಲ್ಲಿ ಬಾಂಗ್ಲಾ ತಂಡ ಮೊದಲ ಬಾರಿ ಏಕದಿನ ವಿಶ್ವಕಪ್‌ನಲ್ಲಿ ಆಡಿದಾಗ ತಂಡದ ನಾಯಕರಾಗಿದ್ದರು.
ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ ಮತ್ತು ಏಷ್ಯನ್ ಕ್ರಿಕೆಟ್ ಸಮಿತಿಯಲ್ಲಿ ಕಾರ್ಯನಿರ್ವಹಿಸಿದ್ದರು. ಈ ವರ್ಷದ ಮಾರ್ಚ್‌ನಲ್ಲಿ ಅವರು ಹಂಗಾಮಿ ಅಧ್ಯಕ್ಷರಾಗಿ ಕೆಲಸ ಆರಂಭಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.